×
Ad

VIDEO ನೋಡಿ- ವೇದಿಕೆಯಲ್ಲೇ ಪರಿಷ್ಕೃತ ಪಠ್ಯಪುಸ್ತಕದ ಪ್ರತಿ ಹರಿದು ಎಸೆದ ಡಿಕೆಶಿ

Update: 2022-06-18 23:55 IST

ಬೆಂಗಳೂರು: ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಸಿದ್ಧಪಡಿಸಿರುವ ವಿವಾದಿತ ಪರಿಷ್ಕೃತ ಪಠ್ಯ ಪುಸ್ತಕಗಳನ್ನು ರಾಜ್ಯ ಸರಕಾರ ಈ ಕೂಡಲೇ ವಾಪಸ್ಸು ಪಡೆಯಬೇಕು ಸೇರಿದಂತೆ ಇನ್ನಿತರೆ ಬೇಡಿಕೆಗಳಿಗೆ ಆಗ್ರಹಿಸಿ ನಡೆಸಿದ ಬೃಹತ್ ಹೋರಾಟದಲ್ಲಿ ಪರಿಷ್ಕೃತ ಪಠ್ಯ ಪುಸ್ತಕದ ಪ್ರತಿಯನ್ನು ವೇದಿಕೆಯಲ್ಲೆ ಹರಿದು ಎಸೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಹಳೆಯ ಪಠ್ಯಪುಸ್ತಕಗಳನ್ನೇ ಮುಂದುವರಿಸುವಂತೆ ಆಗ್ರಹಿಸಿದ್ದಾರೆ. 

ಇದಕ್ಕೂ ಮುನ್ನ ಮಾತನಾಡಿದ ಡಿಕೆಶಿ, 'ಹಳ್ಳಿ, ಹಳ್ಳಿಗೂ ಈ ಹೋರಾಟ ಕೊಂಡೊಯ್ಯುತ್ತೇವೆ.‌ ಸರ್ಕಾರ ತಕ್ಷಣ ಪರಿಷ್ಕೃತ ಪಠ್ಯಪುಸ್ತಕಗಳನ್ನು ವಾಪಸ್ ಪಡೆಯಬೇಕು.‌ ಇಲ್ಲವಾದರೆ 2024ರ ಚುನಾವಣೆಯ ಬಳಿಕ ಪರಿಷ್ಕೃತ ಪಠ್ಯಪುಸ್ತಕಗಳನ್ನು ಕಿತ್ತೆಸೆಯಲಾಗುವುದು' ಎಂದರು.

 ಭಾಷಣ ಮುಗಿಸಿದ ಬಳಿಕ ಪರಿಷ್ಕೃತ ಪಠ್ಯಪುಸ್ತಕದ ಪ್ರತಿಯೊಂದನ್ನು ಹರಿದು ಎಸೆದು ಆಕ್ರೋಶ ಹೊರಹಾಕಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News