‘ಅಗ್ನಿಪಥ’ ಯೋಜನೆ ವಿರೋಧಿಸಿ ಕಾಂಗ್ರೆಸ್ ಮುಖಂಡರಿಂದ ಜಂತರ್ ಮಂತರ್ ನಲ್ಲಿ ಸತ್ಯಾಗ್ರಹ ಆರಂಭ

Update: 2022-06-19 07:03 GMT
Photo:twitter

ಹೊಸದಿಲ್ಲಿ: ಕೇಂದ್ರ ಸರಕಾರದ ಸಶಸ್ತ್ರ ಪಡೆಗಳ ನೇಮಕಾತಿಗೆ ಸಂಬಂಧಿಸಿದ 'ಅಗ್ನಿಪಥ' ಯೋಜನೆ ಜಾರಿಯನ್ನು ವಿರೋಧಿಸಿ ಕಾಂಗ್ರೆಸ್ ಮುಖಂಡರು ರವಿವಾರ ದಿಲ್ಲಿಯ ಜಂತರ್ ಮಂತರ್ ನಲ್ಲಿ ಸತ್ಯಾಗ್ರಹ ಆರಂಭಿಸಿದ್ದಾರೆ.

ದಿಗ್ವಿಜಯ್ ಸಿಂಗ್, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ,  ಕೆ.ಸಿ. ವೇಣುಗೋಪಾಲ್, ಅಧೀರ್ ರಂಜನ್ ಚೌಧರಿ, ಜೈರಾಮ್ ರಮೇಶ್, ಅಜಯ್ ಮಾಕೆನ್ ಸಹಿತ ಹಲವು ಹಿರಿಯ ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು ಹಾಗೂ  "ಅಗ್ನಿಪಥ್ ಸ್ಕೀಮ್ ವಾಪಸ್ ಲೋ (ಅಗ್ನಿಪಥ್ ಯೋಜನೆ ಹಿಂಪಡೆಯಿರಿ)" ಎಂಬ ಫಲಕಗಳನ್ನು ಹಿಡಿದಿದ್ದರು.

'ಅಗ್ನಿಪಥ' ನೇಮಕಾತಿ ಯೋಜನೆಯ ವಿರುದ್ಧ ಕಾಂಗ್ರೆಸ್ 'ಸತ್ಯಾಗ್ರಹ' ಆಚರಿಸಲು ಯೋಜಿಸಿರುವ ಹಿನ್ನೆಲೆಯಲ್ಲಿ ದಿಲ್ಲಿಯ ಜಂತರ್ ಮಂತರ್‌ನಲ್ಲಿ ಪೊಲೀಸ್ ಹಾಗೂ  ಕ್ಷಿಪ್ರ ಕಾರ್ಯಾಚರಣೆ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.  

'ಅಗ್ನಿಪಥ' ಯೋಜನೆಯ ದುಷ್ಪರಿಣಾಮಗಳ ಬಗ್ಗೆ ಗಮನಹರಿಸದೆ ಈ  ಯೋಜನೆಯನ್ನು ಜಾರಿಗೆ ತರಲಾಯಿತು.  ಈ ನಿರ್ಧಾರವನ್ನು ಸರಕಾರವು ದುರಹಂಕಾರದ ರೀತಿಯಲ್ಲಿ ತೆಗೆದುಕೊಂಡಿದೆ. ಸರಕಾರವು ಯೋಜನೆ ಕಾರ್ಯರೂಪಕ್ಕೆ ತರುವ ಮೊದಲು ಸಂಬಂಧಪಟ್ಟವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಸರಕಾರ ಯಾವುದೇ ಕ್ರಮ ಕೈಗೊಳ್ಳುವ ಮುನ್ನ ಕಾದು ಆಲೋಚಿಸಬೇಕು'' ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ವಿಪಕ್ಷ ನಾಯಕ  ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News