×
Ad

ಬೆಂಗಳೂರು: ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತ ದೇಹ ಪತ್ತೆ

Update: 2022-06-19 23:36 IST

ಬೆಂಗಳೂರು, ಜೂ.19: ಬೆಂಗಳೂರಿನಲ್ಲಿ ಎರಡು ದಿನಗಳ ಹಿಂದೆ ಸುರಿದ ಮಳೆಗೆ 28 ವರ್ಷದ ಯುವಕ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಪ್ರಕರಣ ಸಂಬಂಧ ಆತನ ಶವ ಪತ್ತೆಯಾಗಿದೆ. 

ಮೃತ ಯುವಕನನ್ನು ಶಿವಮೊಗ್ಗದ ಮಿಥುನ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಎನ್‍ಡಿಆರ್‍ಎಫ್ ಸಿಬ್ಬಂದಿ ಸತತ 48 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರ ತೆಗೆದಿದ್ದಾರೆ. ಶುಕ್ರವಾರ ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್, ಅಗ್ನಿಶಾಮಕ ದಳ ಮತ್ತು ಪೊಲೀಸರು ಸೇರಿ 30ಕ್ಕೂ ಹೆಚ್ಚು ಸಿಬ್ಬಂದಿ ನಾಲ್ಕು ತಂಡಗಳಾಗಿ ಸೀಗೆಹಳ್ಳಿ ಕೆರೆ ಮತ್ತು ರಾಜಕಾಲುವೆ ಸುತ್ತಮುತ್ತ ಸುಮಾರು ಐದಾರು ಗಂಟೆಗಳ ಶೋಧ ನಡೆಸಿದ್ದರು. 

ರವಿವಾರ ಬೆಳಗ್ಗೆ ಮತ್ತೆ ಶೋಧ ಕಾರ್ಯಾರಂಭಿಸಿದಾಗ ಯುವಕ ಕೊಚ್ಚಿಕೊಂಡು ಹೋದ ಸ್ಥಳದಿಂದ ಸುಮಾರು 1 ಕಿ.ಮೀ ದೂರದಲ್ಲಿ ಶವ ದೊರೆತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಈಸ್ಟರ್ ಪಾಯಿಂಟ್ ಆಸ್ಪತ್ರೆಗೆ ರವಾನಿಸಲಾಗಿದೆ.

ಗಾಯತ್ರಿ ಬಡಾವಣೆಯ ಎಸ್‍ಆರ್ ಲೇಔಟ್ ಬಳಿ ದ್ವಿಚಕ್ರ ವಾಹನವೊಂದು ರಾಜಕಾಲುವೆಗೆ ಬೀಳುತ್ತಿತ್ತು. ಇದನ್ನು ತಪ್ಪಿಸಲು ಹೋಗಿ ಮಿಥುನ್ ನೀರಿನಲ್ಲಿ ಕೊಚ್ಚಿಹೋಗಿದ್ದ. ಇನ್ನೂ, ಮೃತದೇಹ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News