ಜಮ್ಮು ಕಾಶ್ಮೀರ: ಎರಡು ಪ್ರತ್ಯೇಕ ಎನ್‌ಕೌಂಟರ್ : ನಾಲ್ವರು ಶಂಕಿತ ಉಗ್ರರ ಹತ್ಯೆ

Update: 2022-06-19 18:32 GMT

ಶ್ರೀನಗರ, ಜೂ. 19: ಜಮ್ಮು ಹಾಗೂ ಕಾಶ್ಮೀರದ ಕುಪ್ವಾರ ಹಾಗೂ ಕುಲ್ಗಾಂವ್ ಜಿಲ್ಲೆಗಳಲ್ಲಿ ಭದ್ರತಾ ಪಡೆ ರವಿವಾರ ನಡೆಸಿದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಾಲ್ವರು ಶಂಕಿತ ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಕುಪ್ವಾರ ಹಾಗೂ ಕುಲ್ಗಾಂವ್‌ನಲ್ಲಿ ತಲಾ ಇಬ್ಬರು ಶಂಕಿತ ಉಗ್ರರು ಹತರಾಗಿದ್ದಾರೆ. ಈ ಎರಡೂ ಪ್ರದೇಶಗಳಲ್ಲಿ ಇನ್ನೂ ಕೆಲವು ಶಂಕಿತ ಉಗ್ರರು ಅಡಗಿರುವ ಸಾಧ್ಯತೆ ಇದೆ.  ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ. 

ಕುಪ್ವಾರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತನಾದ ಓರ್ವ ಶಂಕಿತ ಉಗ್ರನನನ್ನು ಲಷ್ಕರೆ ತಯ್ಯಿಬಕ್ಕೆ ಸೇರಿದವನೆಂದು ಗುರುತಿಸಲಾಗಿದೆ. ಇನ್ನೋರ್ವ ಶಂಕಿತ ಉಗ್ರನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News