ಚಿಕ್ಕಮಗಳೂರು: ಜೆಸಿಬಿ ಬಳಸಿ ಅಕ್ರಮ ಕಟ್ಟಡ ತೆರವುಗೊಳಿಸಿದ ನಗರಸಭೆ

Update: 2022-06-19 18:40 GMT

ಚಿಕ್ಕಮಗಳೂರು : ಜಾಗ ಒತ್ತುವರಿ ಮಾಡಿ ಅಕ್ರಮವಾಗಿ ನಿರ್ಮಿಸಲ್ಪಟ್ಟಿದ್ದ ಕಟ್ಟಡವೊಂದನ್ನು ರವಿವಾರ ನಗರಸಭೆ ತೆರವುಗೊಳಿಸಿದೆ.

ನಗರದ ಮಲ್ಲಂದೂರು ರಸ್ತೆಯಲ್ಲಿ ನಿರ್ಮಾಣಗೊಂಡಿದ್ದ ಈ ಕಟ್ಟಡವನ್ನು ತೆರವುಗೊಳಿಸುವಂತೆ ನಗರಸಭೆಯಿಂದ ನೋಟಿಸ್ ಜಾರಿಗೊಳಿಸಿದ್ದರು ಸ್ಪಂದಿಸದ  ಹಿನ್ನೆಲೆಯಲ್ಲಿ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಆಯುಕ್ತ ಬಿ.ಸಿ.ಬಸವರಾಜ್ ಮತ್ತು ಸಿಬ್ಬಂದಿಗಳು ಜೆಸಿಬಿ ಯೊಂದಿಗೆ ತೆರಳಿ ಅಕ್ರಮ ಕಟ್ಟಡವನ್ನು ತೆರವುಗೊಳಿಸಲಾಗಿದೆ.

ನಗರಸಭೆ ನಿವೃತ್ತ ರೆವೆನ್ಯೂ ಇನ್ಸ್ಪೆಕ್ಟರ್ ಹುಸೇನ್ ಎಂಬುವವರು ಈ ಕಟ್ಟಡವನ್ನು ಅಕ್ರಮವಾಗಿ ನಿರ್ಮಿಸಿದ್ದರು ಎಂದು ನಗರಸಭೆ ಅಧ್ಯಕ್ಷರು ತಿಳಿಸಿದರು.

ನೋಟೀಸು ನೀಡಿದರು ಕಟ್ಟಡ ತೆರವುಗೊಳಿಸದ ಹಿನ್ನೆಲೆಯಲ್ಲಿ ನಗರಸಭೆ ನ್ಯಾಯಾಲಯದ ಮೊರೆ ಹೋಗಿತ್ತು. ನ್ಯಾಯಾಲಯ ಇತ್ತೀಚೆಗೆ ನಗರಸಭೆ ಪರವಾಗಿ ತೀರ್ಪು ನೀಡಿದ ಮೇರೆಗೆ ಮತ್ತೊಮ್ಮೆ ನೋಟಿಸ್ ಜಾರಿಗೊಳಿಸಿ ಕಟ್ಟಡ ತೆರವುಗೊಳಿಸಲಾಗಿದೆ ಎಂದು ತಿಳಿಸಿದರು 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News