ಬೆಂಗಳೂರು; ಮೆದುಳು ಸಂಶೋಧನೆ ಕೇಂದ್ರಕ್ಕೆ ಪ್ರಧಾನಿ ಮೋದಿ ಚಾಲನೆ

Update: 2022-06-20 07:51 GMT

ಬೆಂಗಳೂರು, ಜೂ. 20: ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿನ ಭಾರತೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ಮೆದುಳು ಸಂಶೋಧನೆ ಕೇಂದ್ರಕ್ಕೆ ಚಾಲನೆ ನೀಡಿದರು.

ಇದೇ ವೇಳೆ 425 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಬಾಗ್ಚಿ- ಪಾರ್ಥಸಾರಥಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್  ಗೆಹ್ಲೋಟ್, ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ದಾನಿಗಳಾದ ಕ್ರಿಸ್ ಗೋಪಾಲಕೃಷ್ಣನ್ ದಂಪತಿ ಹಾಗೂ ಬಾಗ್ಚಿ ಮತ್ತು ಪಾರ್ಥಸಾರಥಿ ಕುಟುಂಬದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News