16 ವರ್ಷದ ಮುಸ್ಲಿಂ ಯುವತಿ ಮದುವೆಯಾಗಬಹುದು : ಪಂಜಾಬ್, ಹರ್ಯಾಣ ಹೈಕೋರ್ಟ್

Update: 2022-06-20 10:30 GMT

ಹೊಸದಿಲ್ಲಿ: 16 ಮತ್ತು 21 ವರ್ಷ ವಯಸ್ಸಿನ ಮುಸ್ಲಿಂ ದಂಪತಿಗಳಿಗೆ ಅವರ ಕುಟುಂಬ ಸದಸ್ಯರಿಂದ ರಕ್ಷಣೆ ನೀಡುವ ವೇಳೆ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸೋಮವಾರ, "16 ವರ್ಷಕ್ಕಿಂತ ಮೇಲ್ಪಟ್ಟ ಮುಸ್ಲಿಂ ಹುಡುಗಿ ತನ್ನ ಆಯ್ಕೆಯ ವ್ಯಕ್ತಿಯೊಂದಿಗೆ ವಿವಾಹದ ಒಪ್ಪಂದಕ್ಕೆ ಪ್ರವೇಶಿಸಲು ಸಮರ್ಥಳು" ಎಂದು ತೀರ್ಪು ನೀಡಿದೆ. 

ರಕ್ಷಣೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದ ಪಠಾಣ್‌ಕೋಟ್ ಮೂಲದ ಮುಸ್ಲಿಂ ದಂಪತಿಯ ಮನವಿಯ ಮೇರೆಗೆ ನ್ಯಾಯಮೂರ್ತಿ ಜಸ್ಜಿತ್ ಸಿಂಗ್ ಬೇಡಿ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

"ಅರ್ಜಿದಾರರು ತಮ್ಮ ಕುಟುಂಬದ ಸದಸ್ಯರ ಇಚ್ಛೆಗೆ ವಿರುದ್ಧವಾಗಿ ವಿವಾಹವಾದರು ಎಂಬ ಕಾರಣಕ್ಕಾಗಿ, ಅವರು ಭಾರತದ ಸಂವಿಧಾನದಲ್ಲಿ ಕಲ್ಪಿಸಿದಂತೆ ಅವರ ಮೂಲಭೂತ ಹಕ್ಕುಗಳಿಂದ ವಂಚಿತರಾಗಲು ಸಾಧ್ಯವಿಲ್ಲ" ಎಂದು ಪೀಠ ಹೇಳಿದೆ.

ಇಸ್ಲಾಮಿಕ್ ಶರಿಯಾ ನಿಯಮವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಬೇಡಿ, ಮುಸ್ಲಿಂ ಹುಡುಗಿಯ ವಿವಾಹವನ್ನು ಮುಸ್ಲಿಂ ವೈಯಕ್ತಿಕ ಕಾನೂನಿನಿಂದ ನಿಯಂತ್ರಿಸಲಾಗುತ್ತದೆ ಎಂದು ಹೇಳಿದರು.

ದಂಪತಿಗೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಮತ್ತು ಕಾನೂನಿನ ಪ್ರಕಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಎಸ್‌ಎಸ್‌ಪಿ ಪಠಾಣ್‌ಕೋಟ್‌ಗೆ ನಿರ್ದೇಶನ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News