×
Ad

ಉಡುಪಿ: ನಾಪತ್ತೆಯಾಗಿದ್ದ ವ್ಯಕ್ತಿ 25 ವರ್ಷಗಳ ಬಳಿಕ ಶವವಾಗಿ ಪತ್ತೆ!

Update: 2022-06-20 21:04 IST

ಉಡುಪಿ: 25 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಇಂದು ಶವವಾಗಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಉಡುಪಿಯ ಹಳೆ ಸರಕಾರಿ ಬಸ್ಸು ನಿಲ್ದಾಣದಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ವೃದ್ಧರನ್ನು ಮೇ 1ರಂದು ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಕೆಲವು ದಿನಗಳ ಬಳಿಕ ವೃದ್ಧರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು. ಶವವನ್ನು ಶವಾಗಾರದಲ್ಲಿ ರಕ್ಷಿಸಿಡಲಾಗಿತ್ತು.

ದಾಖಲು ಪ್ರಕ್ರಿಯೆ ನಡೆಸುವಾಗ ವೃದ್ಧರು ತನ್ನ ಹೆಸರು ಬಾಬು ಮರಕಾಲ ಬಾರ್ಕೂರಿನ ನಿವಾಸಿ ಎಂದು ಹೇಳಿಕೊಂಡಿದ್ದರು. ಈ ವಿಚಾರ ತಿಳಿದ ಸಂಬಂಧಿಕರು ಆಸ್ಪತ್ರೆಯನ್ನು ಸಂಪರ್ಕಿಸಿ ಕಾನೂನು ಪ್ರಕ್ರಿಯೆ ಮೂಲಕ ಶವವನ್ನು ಪಡೆದುಕೊಂಡರು. ಕುಟುಂಬಿಕರು ಮೃತರ ಅಂತ್ಯಸಂಸ್ಕಾರವನ್ನು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಹಕಾರದಿಂದ ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಸೋಮವಾರ ನೆರವೇರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News