ಮೈಸೂರು: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಗೈರು
Update: 2022-06-20 22:33 IST
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಗೈರು ಹಾಜರಿ ಎದ್ದು ಕಾಣುತ್ತಿತ್ತು.
ನಗರದ ಮಹರಾಜ ಕಾಲೇಜು ಮೈದಾನದಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಫಲಾನುಭವಿಗಳೊಂದಿಗೆ ಸಂವಾದ ಮತ್ತು ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚವರು ಭಾಗವಹಿಸದಿದ್ದದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಪರ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತು ಸಂಸದ ಪ್ರತಾಪ್ ಸಿಂಹ ಸಮರ್ಪಕವಾಗಿ ಕೆಲಸ ಮಾಡಲಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಇದರ ಹಿನ್ನಲೆಯಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಅವರನ್ನು ಪಕ್ಷ ಕಡೆಗಣಿಸಿದಿಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ.