ರಾಜ್ಯದಲ್ಲಿಂದು 530 ಕೊರೋನ ಪ್ರಕರಣ ದೃಢ

Update: 2022-06-20 17:43 GMT
ಸಾಂದರ್ಭಿಕ ಚಿತ್ರ (PTI)

ಬೆಂಗಳೂರು, ಜೂ.20: ರಾಜ್ಯದಲ್ಲಿ ಸೋಮವಾರ 530 ಹೊಸ ಕೊರೋನ ಪ್ರಕರಣಗಳು ದೃಢವಾಗಿದ್ದು, 637 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,61,361ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,071ಕ್ಕೆ ತಲುಪಿದೆ.        
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 4,928ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 530 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 1, ಬಳ್ಳಾರಿ 3, ಬೆಳಗಾವಿ 3, ಬೆಂಗಳೂರು ನಗರ 494, ದಕ್ಷಿಣಕನ್ನಡ 5, ಧಾರವಾಡ 1, ಗದಗ 1, ಕಲಬುರಗಿ 5, ಮೈಸೂರು 6, ರಾಮನಗರ 3, ಶಿವಮೊಗ್ಗ 1, ತುಮಕೂರು 1, ಉಡುಪಿ 2, ಉತ್ತರಕನ್ನಡ 3, ವಿಜಯಪುರ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News