ಪಕ್ಷದ ಮುಖ್ಯ ಸಚೇತಕ ಸ್ಥಾನದಿಂದ ಏಕನಾಥ್ ಶಿಂಧೆ ಅವರನ್ನು ವಜಾಗೊಳಿಸಿದ ಶಿವಸೇನೆ

Update: 2022-06-21 09:45 GMT
Photo:PTI

ಮುಂಬೈ: : 21 ಶಾಸಕರೊಂದಿಗೆ ಗುಜರಾತ್‌ನ  ಸೂರತ್ ಹೋಟೆಲ್‌  ನಲ್ಲಿ ಬೀಡು ಬಿಟ್ಟಿರುವ ಹಿರಿಯ ನಾಯಕ ಹಾಗೂ ಸಚಿವ ಏಕನಾಥ್ ಶಿಂಧೆ ಅವರನ್ನು ಪಕ್ಷದ ಮುಖ್ಯ ಸಚೇತಕ ಸ್ಥಾನದಿಂದ ಶಿವಸೇನೆ ಮಂಗಳವಾರ ವಜಾಗೊಳಿಸಿದೆ ಎಂದು NDTV ವರದಿ ಮಾಡಿದೆ.

ಶಿವಸೇನೆಯ ಸೆವ್ರಿ ಶಾಸಕ ಅಜಯ್ ಚೌಧರಿ ಅವರನ್ನು  ಏಕನಾಥ್ ಶಿಂಧೆ ವಜಾದಿಂದ ತೆರವಾಗಿರುವ   ನೂತನ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಅಧಿಕಾರಕ್ಕಾಗಿ ಎಂದಿಗೂ ಮೋಸ ಮಾಡುವುದಿಲ್ಲ ಎಂದು ಏಕನಾಥ್ ಶಿಂಧೆ  ಟ್ವೀಟ್ ಮಾಡಿದ್ದಾರೆ.

"ಬಾಳಾಸಾಹೇಬರು ನಮಗೆ ಹಿಂದುತ್ವವನ್ನು ಕಲಿಸಿದ್ದಾರೆ. ಬಾಳಾಸಾಹೇಬರ ಚಿಂತನೆಗಳು ಹಾಗೂ  ಧರ್ಮವೀರ್ ಆನಂದ್ ದಿಘೆ ಸಾಹೇಬ್ ಅವರ ಬೋಧನೆಗಳಿಗೆ ಸಂಬಂಧಿಸಿದಂತೆ ನಾವು ಎಂದಿಗೂ ಅಧಿಕಾರಕ್ಕಾಗಿ ಮೋಸ ಮಾಡಿಲ್ಲ" ಎಂದು ಶಿಂಧೆ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮಹಾರಾಷ್ಟ್ರ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ಗಳನ್ನು ಒಳಗೊಂಡಿರುವ ಆಡಳಿತಾರೂಢ ಮಹಾ ವಿಕಾಸ್ ಅಗಾಡಿ (ಎಂವಿಎ) ಮೈತ್ರಿಕೂಟವು ಹಿನ್ನಡೆ ಅನುಭವಿಸಿದ ಒಂದು ದಿನದ ನಂತರ ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News