ಪರಿಷ್ಕೃತ ಪಠ್ಯಪುಸ್ತಕ ಹಿಂಪಡೆಯುವಂತೆ ಒತ್ತಾಯಿಸಿ ಸಿಎಂಗೆ ಪತ್ರ ಬರೆದ ಮಾಜಿ ಪ್ರಧಾನಿ ದೇವೇಗೌಡ

Update: 2022-06-21 10:36 GMT

ಬೆಂಗಳೂರು, ಜೂ.21: ಮರು ಪರಿಷ್ಕರಣೆಯ ಪಠ್ಯಪುಸ್ತಕಗಳನ್ನು ವಾಪಸ್ ಪಡೆದು, ಹಿಂದೆ ಇದ್ದ ಬರಗೂರು ರಾಮಚಂದ್ರಪ್ಪರ ನೇತೃತ್ವದ 27 ಸಮಿತಿಗಳು ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನೇ ಈ ವರ್ಷ ಮುಂದುವರಿಸುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಒತ್ತಾಯಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿರುವ ದೇವೇಗೌಡ, ಪಠ್ಯಪುಸ್ತಕಗಳ ಮರು ಪರಿಷ್ಕರಣೆಗೆ ನೇಮಿಸಿದ ಸಮಿತಿಯ ಅಧ್ಯಕ್ಷರು ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ಅವಮಾನ ಮಾಡಿದ್ದಾರೆ. ನಾಡಗೀತೆಯನ್ನು ಅಸಭ್ಯವಾಗಿ ತಿರುಚಿದವರಿಗೆ ಬಹುಮಾನ ನೀಡುತ್ತೇನೆಂದು ಹೇಳಿದ್ದು ಕೂಡ ಕುವೆಂಪುರಿಗೆ ಮಾಡಿದ ದೊಡ್ಡ ಅವಮಾನ. ನಾಡಧ್ವಜವನ್ನು ಒಳ ಉಡುಪಿಗೆ ಹೋಲಿಸಿದ್ದೂ ನಾಡ ಅಸ್ಮಿತೆಗೆ ಮಾಡಿದ ಅವಮಾನ. ಜೊತೆಗೆ ಡಾ.ಬಿ.ಆರ್.ಅಂಬೇಡ್ಕರ್‌ ಅವರನ್ನೂ ಹಂಗಿಸಿದ್ದಾರೆ. ಇಂಥ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರಕಾರ ನಿರ್ಧರಿಸಿದ್ದೇ ಮೊದಲ ತಪ್ಪು ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮರು ಪರಿಷ್ಕರಣೆಯಿಂದ ಪಠ್ಯಪುಸ್ತಕಗಳಲ್ಲಿನ ಅಸಂಖ್ಯಾತ ದೋಷ ಮತ್ತು ಅನ್ಯಾಯಗಳನ್ನು ಕೇವಲ ತಪ್ಪೋಲೆ ಅಥವಾ ಪ್ರತ್ಯೇಕ ಪುಟಗಳ ಮುದ್ರಣದಿಂದ ಸರಿಪಡಿಸಲು ಸಾಧ್ಯವಾಗುವುದಿಲ್ಲ. ವಿಶ್ವಮಾನವ ಕುವೆಂಪು ಹೋರಾಟ ಸಮಿತಿಯ ಹಕ್ಕೊತ್ತಾಯವನ್ನು  ನಾನು ಕೂಡ ಬೆಂಬಲಿಸುತ್ತಾ, ಈ ವಿಷಯವಾಗಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.

ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಇಲ್ಲಿದೆ...

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News