ಕಾಂಗ್ರೆಸ್ ನಾಯಕರ ಮೇಲೆ ನಡೆಯುತ್ತಿರುವ ಈಡಿ ದಾಳಿ ರಾಜಕೀಯ ಪ್ರೇರಿತ-ಎಂ.ಬಿ. ವಿಶ್ವನಾಥ ರೈ

Update: 2022-06-21 11:35 GMT

ಪುತ್ತೂರು: ಸೋನಿಯಾ, ರಾಹುಲ್ ಗಾಂಧಿ ಅವರ ಮೇಲೆ ನಡೆದ ಈಡಿ ದಾಳಿಯು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ರಾಜಕೀಯ ಪ್ರೇರಿತವಾಗಿದ್ದು, ರಾಜಕೀಯವಾಗಿ ಅವರನ್ನು ಎದುರಿಸಲು ಸಾಧ್ಯವಾಗದೆ ಇಂತಹ ದಾಳಿಯನ್ನು ನಡೆಸಲಾಗುತ್ತಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ ಆರೋಪಿಸಿದರು.

ಅವರು ಮಂಗಳವಾರ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿರುವ ಅಮರ್ ಜವಾನ್ ಸ್ಮಾರಕದ ಬಳಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಬಿಜೆಪಿ ಸರ್ಕಾರದ ಈಡಿ ದಾಳಿ ಹಾಗೂ ದ್ವೇಷ ರಾಜಕಾರಣ ತನಿಖೆ ನೆಪದಲ್ಲಿ ಕಾಂಗ್ರೆಸ್ ನಾಯಕರಿಗೆ ಜಾರಿ ನಿದೇಶನಾಲಯದ ಕಿರುಕುಳ, ಎಐಸಿಸಿ ಕಾಂಗ್ರೆಸ್ ಕಚೇರಿಗೆ ನಾಯಕ ಪ್ರವೇಶ ನಿರ್ಬಂಧ, ಪೊಲೀಸರ ಮೂಲಕ ಮಾಡಿತ್ತಿರುವ ದೌರ್ಜನ್ಯ ಹಾಗೂ ತನಿಖಾ ಸಂಸ್ಥೆಗಳ ದುರ್ಬಳಕೆ ಮುಂತಾದ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಖಂಡಿಸಿ ನಡೆಸಲಾದ ಪ್ರತಿಭಟನೆಯಲ್ಲಿ ಮಾತನಾಡಿದರು. 

ಕಾಂಗ್ರೆಸ್ ಜಿಲ್ಲಾ ವಕ್ತಾರ ಮಹಮ್ಮದ್ ಬಡಗನ್ನೂರು ಮಾತನಾಡಿ, ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್.ಮಹಮ್ಮದ್ ಆಲಿ, ಪುತ್ತೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ, ಎನ್‍ಎಸ್‍ಯುಐ  ಮುಖಂಡ ಭಾತಿಷಾ ಅಳಕೆಮಜಲು ಮತ್ತಿತರರು ಮಾತನಾಡಿದರು.
ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಕೌಶಲ್ ಪ್ರಸಾದ್ ಶೆಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿಜಯಲಕ್ಷ್ಮಿ.ಕೆ, ಬ್ಲಾಕ್ ಕಾಂಗ್ರೆಸ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್, ಪ್ರಧಾನ ಕಾರ್ಯದರ್ಶಿಗಳಾದ ಅಸ್ಮಾ ಗಟ್ಟಮನೆ, ವೀಣಾ ನಾಯಕ್, ತಾಲ್ಲೂಕು ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಎಸ್ಸಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಕೂರ್ ಹಾಜಿ, ಸಾಮಾಜಿಕ ಜಾಲ ತಾಣ ಘಟಕದ ಅಧ್ಯಕ್ಷ ಸಿದ್ದೀಕ್ ಸುಲ್ತಾನ್, ಪಕ್ಷದ ಮುಖಂಡರಾದ ಎ.ಕೆ.ಜಯರಾಮ ರೈ,ಬಾಬು ರೈ ಕೋಟೆ, ರಾಮಚಂದ್ರ ಸೊರಕೆ, ಗಿರೀಶ್ ಗೋಲ್ವಾಲ್ಕರ್, ದಾಮೋದರ್ ಭಂಡಾರ್ಕರ್, ಐತ್ತಪ್ಪ ಪೇರಲ್ತಡ್ಕ, ಜಯಂತಿ ಬಲ್ನಾಡು ಮತ್ತಿತರರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News