ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Update: 2022-06-21 12:07 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.21: ರಾಜ್ಯದ ನಾನಾ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಮುಂದಿನ ನಾಲ್ಕು ದಿನ ಇನ್ನಷ್ಟು ತೀವ್ರಗೊಳ್ಳಲಿದೆ.  ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಜೂ.22ರಿಂದ 25ರವರೆಗೆ ಗುಡುಗು-ಮಿಂಚು ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದ್ದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. 

ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಜೂ.22ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಇತರೆ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 2 ದಿನ ಸಾಧಾರಣ ಮಳೆಯಾಗಲಿದ್ದು, ಜೂ.24ರಿಂದ ಈ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ನಾಲ್ಕೈದು ದಿನಗಳಿಂದ ಕರಾವಳಿ, ಮಲೆನಾಡು ಹೊರತುಪಡಿಸಿದರೆ ದಕ್ಷಿಣ ಒಳನಾಡಿನಲ್ಲಿ ಉತ್ತಮ ವರ್ಷಧಾರೆಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News