ಜೂ.27ರಿಂದ ಎಸೆಸೆಲ್ಸಿ ಪೂರಕ ಪರೀಕ್ಷೆ

Update: 2022-06-21 12:46 GMT
ಸಾಂದರ್ಭಿಕ ಚಿತ್ರ (PTI)

ಬೆಂಗಳೂರು, ಜೂ.21: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2021-22ನೇ ಸಾಲಿನ ಎಸೆಸೆಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜೂ.27ರಿಂದ ಜು.4ರವರೆಗೆ ಪರೀಕ್ಷೆಯು ನಡೆಯಲಿದೆ.

ಜೂ.27ರಂದು ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ ವಿಷಯಗಳ ಪರೀಕ್ಷೆ ನಡೆಯಲಿದೆ. ಜೂ.28ಕ್ಕೆ ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ಉರ್ದು, ಇಂಗ್ಲಿಷ್, ಸಂಸ್ಕೃತ ಪರೀಕ್ಷೆಗಳು ನಡೆಯಲಿವೆ. ಜೂ.29ಕ್ಕೆ ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ ಪರೀಕ್ಷೆಗಳು ನಡೆಯಲಿವೆ. ಜೂ.30 ರಂದು ಸಮಾಜ ವಿಜ್ಞಾನ, ಜು.1ರಂದು ತೃತೀಯ ಭಾಷೆ ಹಿಂದಿ, ಕನ್ನಡ ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಪರೀಕ್ಷೆಗಳು ನಡೆಯಲಿವೆ. ಜು.4ರಂದು ಗಣಿತ, ಸಮಾಜ ಶಾಸ್ತ್ರ ವಿಷಯಗಳ ಪರೀಕ್ಷೆ ನಡೆಯಲಿದೆ.

ಕೆಎಸ್ಸಾರ್ಟಿಸಿ ಬಸ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ
ಎಸೆಸೆಲ್ಸಿ ಪೂರಕ ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಕೆಎಸ್ಸಾರ್ಟಿಸಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಕಲ್ಪಿಸಲಾಗಿದೆ.

2021-22ನೇ ಸಾಲಿನಲ್ಲಿ ವಿತರಿಸಿರುವ ಪಾಸುಗಳನ್ನು ಅಥವಾ ಪರೀಕ್ಷಾ ಪ್ರವೇಶ ಪತ್ರವನ್ನು ಇರಿಸಿಕೊಂಡು ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಪ್ರಯಾಣಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News