ಯೋಗದ ಮೂಲಕ ಮಾನವೀಯ ಮೌಲ್ಯ ರೂಡಿಸಿಕೊಳ್ಳಲು ಸಾಧ್ಯ: ಉಡುಪಿ ಡಿಸಿ ಕೂರ್ಮಾರಾವ್

Update: 2022-06-21 13:52 GMT

ಉಡುಪಿ: ಯೋಗವು ವಿಶ್ವಕ್ಕೆ ಭಾರತ ನೀಡಿರುವ ಅತ್ಯುತ್ತಮ ಕೊಡುಗೆ. ಯೋಗದ ಮೂಲಕ ಪ್ರತಿಯೊಬ್ಬರೂ ತಮ್ಮನ್ನು ತಾವು ಅರಿತುಕೊಳ್ಳಲು ಹಾಗೂ ಉತ್ತಮ ಮಾನವೀಯ ಮೌಲ್ಯಗಳನ್ನು ರೂಡಿಸಿಕೊಳ್ಳಲು ಸಾಧ್ಯ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.

ಆಯುಷ್ ಇಲಾಖೆ, ಉಡುಪಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಎನ್‌ಸಿಡಿ ವಿಭಾಗ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪರ್ಯಾಯ ಕೃಷ್ಣಾಪುರ ಮಠ ಉಡುಪಿ ಹಾಗೂ  ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ  ಸಹ ಯೋಗದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಮಂಗಳವಾರ ರಾಜಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಅವರು ಮಾತನಾಡುತಿದ್ದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕರಾವಳಿ ಅಭಿವೃದ್ಧಿ ಪ್ರಾದಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಇಂದಿನ ಯಾಂತ್ರಿಕ ಬದುಕಿನಲ್ಲಿ, ದೇಹಕ್ಕೆ ಸೂಕ್ತ ವ್ಯಾಯಾಮ ದೊರೆಯದೇ, ನಾವುಗಳು ಅನೇಕ ರೋಗಗಳಿಂದ ಬಳಲು ತ್ತಿದ್ದು, ದೈನಂದಿನ ಬದುಕಿನಲ್ಲಿ ಪ್ರತಿದಿನ ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿಯಾಗಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವ ಜನಿಕರು ಯೋಗಾಸನದ ವಿವಿಧ ಆಸನಗಳನ್ನು ಅಭ್ಯಾಸ ಮಾಡಿದರು. ಯೋಗ ಶಿಕ್ಷಕ ಬಿರಾದರ್ ಯೋಗ ಪ್ರಾತ್ಯಕ್ಷಿಕೆ ನೀಡಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ಪತಂಜಲಿ ಯೋಗ ಶಿಕ್ಷಣ ಕೇಂದ್ರದ ಜಿಲ್ಲಾ ಸಂಚಾಲಕ ಚಂದ್ರಶೇಖರ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸತೀಶ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ನಾಪತ್ತೆ