ಸರಕಾರಿ ಭೂಮಿ ಮಂಜೂರು ಪ್ರಕರಣ: ಶಾಸಕ ನಾರಾಯಣಸ್ವಾಮಿ ವಿರುದ್ಧ ತನಿಖೆಗೆ ಕೋರ್ಟ್ ಆದೇಶ

Update: 2022-06-21 14:30 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.21: ಪಡಿತರ ಚೀಟಿ ಹೊಂದಿದ್ದಾರೆ ಎಂದು ಸರಕಾರದ ಭೂಮಿಯನ್ನು ತಮ್ಮ ತಾಯಿಗೆ ಮಂಜೂರು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗಾರಪೇಟೆ ಶಾಸಕ ಕೆ.ಎಂ.ನಾರಾಯಣಸ್ವಾಮಿ ಸೇರಿ ಅಧಿಕಾರಗಳ ವಿರುದ್ಧ ದೂರು ದಾಖಲಿಸಿ, ತನಿಖೆ ನಡೆಸುವಂತೆ ನಗರದ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿದೆ.

ಈ ಸಂಬಂಧ ಕೆ.ಸಿ.ರಾಜಣ್ಣ ಎನ್ನುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಈ ಆದೇಶ ನೀಡಿದೆ. ಖಾಸಗಿ ದೂರು ದಾಖಲಿಸಿಕೊಂಡು ಸ್ಥಿತಿಗತಿ ವರದಿ ಸಲ್ಲಿಸುವಂತೆ ಕೋಲಾರದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗೆ ಕೋರ್ಟ್ ಆದೇಶಿಸಿದೆ. 

ತನ್ನ ತಾಯಿ ಅವರಿಗೆ ಶಾಸಕ ನಾರಾಯಣಸ್ವಾಮಿ ಅವರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ ಎಂದು ತಿಳಿಸಿ ಹುದುಕುಳ ಗ್ರಾಮದಲ್ಲಿ 3 ಎಕರೆ 10 ಗುಂಟೆ ಜಮೀನನ್ನು ಮಂಜೂರು ಮಾಡಿದ್ದರು. ಈ ಭ್ರಷ್ಟಾಚಾರದಲ್ಲಿ ಕಂದಾಯ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News