ಜೂನ್ 22ರಂದು ವಿಶ್ವ ರಕ್ತದಾನಿಗಳ ದಿನಾಚರಣೆ

Update: 2022-06-21 15:38 GMT

ಉಡುಪಿ : ಜಿಲ್ಲಾ ಆಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ, ಲಯನ್ಸ್ ಕ್ಲಬ್, ಅಪ್ಪು ಅಭಿಮಾನಿಗಳ ಬಳಗ ಉಡುಪಿ ಹಾಗೂ ಸೈಂಟ್ ಮೇರಿಸ್ ಖಾಸಗಿ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ ಚಿಟ್ಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ, ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಅತೀ ಹೆಚ್ಚು ಬಾರಿ ರಕ್ತದಾನ ಮಾಡಿರುವ ದಾನಿಗಳಿಗೆ ಸನ್ಮಾನ ಕಾರ್ಯಕ್ರಮ ಜೂನ್ ೨೨ರಂದು ಬೆಳಗ್ಗೆ ೧೦ ಗಂಟೆಗೆ ನಗರದ ಚಿಟ್ಪಾಡಿ ಸೈಂಟ್ ಮೇರಿಸ್ ಖಾಸಗಿ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಅಧ್ಯಕ್ಷತೆ ವಹಿಸಲಿದ್ದಾರೆ. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ. ಮಧುಸೂದನ ನಾಯಕ್, ಸೈಂಟ್ ಮೇರಿಸ್ ವಿದ್ಯಾಸಂಸ್ಥೆಯ ಸಂಚಾಲಕ ವಂ.ಚಾರ್ಲ್ಸ್ ಮಿನೆಜಸ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಸುಬ್ರಹ್ಮಣ್ಯ ಶೇರೆಗಾರ್, ಲಯನ್ಸ್ ಕ್ಲಬ್ ಅಧ್ಯಕ್ಷ ರವಿರಾಜ್ ನಾಯಕ್ ಭಾಗವಹಿಸಲಿದ್ದು, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ವೀಣಾ ಕುಮಾರಿ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News