ದ.ಕ. ಪತ್ರಕರ್ತರ ಸಂಘದಿಂದ ಯೋಗ ದಿನಾಚರಣೆ

Update: 2022-06-21 16:31 GMT

ಮಂಗಳೂರು: ಮಾನಸಿಕ ಆರೋಗ್ಯಕ್ಕಾಗಿ ಮತ್ತು ಒತ್ತಡ ನಿವಾರಣೆಗೆ ಯೋಗ ಚಟುವಟಿಕೆ ಎಲ್ಲರಿಗೂ ಅಗತ್ಯ ವಿದೆ ಎಂದು ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಅಧ್ಯಕ್ಷ  ಸಿ.ಎ. ಶಾಂತಾ ರಾಮ್ ಶೆಟ್ಟಿ ತಿಳಿಸಿದ್ದಾರೆ.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪತಂಜಲಿ ಯೋಗ ಸಮಿತಿಯ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಮಂಗಳೂರು ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯೋಗವು ಇಂದು ವಿಶ್ವಸಂಸ್ಥೆಯಲ್ಲಿ ಎಲ್ಲಾ ದೇಶಗಳ ಬೆಂಬಲ ಪಡೆದು ಮಾನ್ಯತೆ ಪಡೆದು ವಿಶ್ವ ಯೋಗ ದಿನಾಚರಣೆಗೆ ಕಾರಣವಾಗಿರುವುದು ಭಾರತೀಯರಿಗೆ ಹೆಮ್ಮೆಯ ಸಂಗತಿ ಎಂದು ಶಾಂತರಾಮ ಶೆಟ್ಟಿ ಹೇಳಿದರು.

ಈ ಸಂದರ್ಭ ಯೋಗ ಗುರು ಡಾ.ಜಗದೀಶ್ ಶೆಟ್ಟಿ ಬಿಜೈ ಹಾಗೂ ತಂಡದವರಿಂದ ಮತ್ತು ಪತ್ರಕರ್ತರಿಂದ ಯೋಗ ಪ್ರದರ್ಶನ ನಡೆಯಿತು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಭಾರತೀಯ ರೆಡ್‌ಕ್ರಾಸ್ ಸಮಿತಿಯ ಕಾರ್ಯ ಕಾರಿ ಸಮಿತಿ ಸದಸ್ಯ ಹರೀಶ್ ರೈ, ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಸತೀಶ್ ಇರಾ, ಮಂಗಳೂರು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ್ ಶೆಟ್ಟಿ ಬಾಳ ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News