ವೆಲ್ಫೇರ್ ಪಾರ್ಟಿ ಉ.ಕ. ಜಿಲ್ಲಾಧ್ಯಕ್ಷರಾಗಿ ಅಬ್ದುಲ್ ಮಾಜೀದ್ ನೇಮಕ

Update: 2022-06-21 17:19 GMT

ಭಟ್ಕಳ: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉತ್ತರಕನ್ನಡ ಜಿಲ್ಲಾಧ್ಯಕ್ಷ ಡಾ.ನಸೀಮ್ ಖಾನ್ ತಮ್ಮ ವೈಯಕ್ತಿಕ ಕಾರಣಗಳಿಂದಾಗಿ ಪಕ್ಷದ ಜಿಲ್ಲಾಧ್ಯಕ್ಷ ಹುದ್ದೆ ಹಾಗೂ ಪ್ರಾಥಮಿಕ ಸದಸ್ಯತ್ವದಿಂದ ರಾಜಿನಾಮೆ ನೀಡಿದ್ದು ತಕ್ಷಣದಿಂದ ಜಾರಿಯಾಗುವಂತೆ ಅಬ್ದುಲ್ ಮಾಜೀದ್ ಕೋಲಾರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ಈ ಕುರಿತಂತೆ ಆದೇಶಪತ್ರವನ್ನು ನೀಡಿರುವ ರಾಜ್ಯಾಧ್ಯಕ್ಷ ನ್ಯಾಯವಾದಿ ತಾಹಿರ್ ಹುಸೇನ್ ಪಕ್ಷ ಸಂಘಟನೆಯ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News