×
Ad

​ಜೂ.24: ಪುತ್ತೂರಿನಲ್ಲಿ ಏಕರೂಪದ ತಂತ್ರಾಂಶ ಉದ್ಘಾಟನೆ

Update: 2022-06-22 19:00 IST

ಮಂಗಳೂರು: ರಾಜ್ಯ ಸರಕಾರದ ನಿರ್ದೇಶನದಂತೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಏಕರೂಪದ ತಂತ್ರಾಂಶವನ್ನು ಅಳವಡಿಸುವ ಯೋಜನೆಯನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಮ್ಮಿಕೊಂಡಿದೆ.

ಅದರಂತೆ ಜೂ.೨೪ರಂದು ಪುತ್ತೂರಿನ ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕೇಂದ್ರ ಕಚೇರಿ ಕಟ್ಟಡವನ್ನು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಉದ್ಘಾಟಿಸಲಿದ್ದಾರೆ. ಈ ಸಂದರ್ಭ ಏಕರೀಪ ತಂತ್ರಾಂಶ ಯೋಜನೆಯನ್ನು ಸಚಿವರು ಉದ್ಘಾಟಿಸಲಿದ್ದಾರೆ ಎಂದು ಎಸ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News