×
Ad

ಉಡುಪಿ; ಮೆಹಂದಿ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಮೃತ್ಯು

Update: 2022-06-22 20:47 IST

ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿ ಅಂಬಾಗಿಲು ಪುತ್ತೂರು ಎಂಬಲ್ಲಿ ಜೂ. 21ರಂದು ರಾತ್ರಿ ವೇಳೆ ನಡೆದಿದೆ.

ಮೃತರನ್ನು ಪುತ್ತೂರು ನಿವಾಸಿ ಗಣಪತಿ ಆಚಾರ್ಯ (56) ಎಂದು ಗುರುತಿಸಲಾಗಿದೆ. ನೆರೆಮನೆಯ ಸಂಬಂಧಿಕರ ಮೆಹೆಂದಿ ಕಾರ್ಯಕ್ರಮದಲ್ಲಿ ನೃತ್ಯ ಮಾಡು ತ್ತಿದ್ದ ಗಣಪತಿ ಆಚಾರ್ಯಗೆ ಎದೆನೋವು ಕಾಣಿಸಿಕೊಂಡಿತ್ತೆನ್ನಲಾ ಗಿದೆ. ತಕ್ಷಣವೇ ಕುರ್ಚಿಯಲ್ಲಿ ಕುಳಿತುಕೊಂಡ ಅವರು ಅಲ್ಲೇ ಕುಸಿದು ಬಿದ್ದರು. ತೀವ್ರವಾಗಿ ಅಸ್ವಸ್ಥಗೊಂಡ ಇವರು ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.

ಇವರು ಚಿನ್ನದ ಆಭರಣ ತಯಾರಿಕೆ ವೃತ್ತಿ ನಡೆಸುತ್ತಿದ್ದು, ಸೊಸೈಟಿಯೊಂದರ ಪಿಗ್ಮಿ ಸಂಗ್ರಹಕಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೃತರು ಪತ್ನಿ ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News