ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2022-06-22 15:21 GMT

ಹಿರಿಯಡ್ಕ: ವೈಯಕ್ತಿಕ ಕಾರಣದಿಂದಾಗಿ ಮಾನಸಿಕವಾಗಿ ನೊಂದು ಜೂ.೧೭ರ ಮಧ್ಯಾಹ್ನ ಬೊಮ್ಮರಬೆಟ್ಟು ಗ್ರಾಮದ ಪುತ್ತಿಗೆ ಎಂಬಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸ್ಥಳೀಯ ನಿವಾಸಿ ಕೃಷ್ಣಮೂರ್ತಿ ರಾವ್(೫೬) ಎಂಬವರು ಜೂ.೨೧ರಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಂಕರನಾರಾಯಣ: ಪಾಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ಸಿದ್ಧಾಪುರ ನಿವಾಸಿ ಪುಂಡಲೀಕ ಕಾಮತ್(೬೧) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News