ಜೂ. 26ರಿಂದ ಮದ್ಯ ವ್ಯಸನ ವಿಮುಕ್ತಿ ಶಿಬಿರ

Update: 2022-06-22 16:12 GMT

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಹಾಗೂ ಕಮಲ ಬಾಳಿಗಾ ಚಾರಿಟಬಲ್ ಟ್ರಸ್ಟ್ ಮುಂಬಯಿ ಇವರ ಸಂಯುಕ್ತ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನ ಯೋಜನೆಯಡಿ ಜಿಲ್ಲೆಯ ಸಾರ್ವಜನಿಕರಲ್ಲಿ ಮಾದಕ ದ್ರವ್ಯ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಜೂನ್ 26ರಿಂದ ಜುಲೈ ೫ರವರೆಗೆ ಉಚಿತ ಮದ್ಯ ವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರವನ್ನು ಆಯೋಜಿಸಲಾಗುವುದು.

ಶಿಬಿರದಲ್ಲಿ ೫೦ ಮಂದಿ ಶಿಬಿರಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದ್ದು, ಮದ್ಯವ್ಯಸನದಿಂದ ವಿಮುಕ್ತಿ ಹೊಂದಲು ಇಚ್ಛಿಸುವ ಮದ್ಯವ್ಯಸನಿಗಳು ಜೂನ್ ೨೩ರ ಒಳಗೆ ಡಾ.ಎ.ವಿ ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.

ಶಿಬಿರದಲ್ಲಿ ಶಿಬಿರಾರ್ಥಿಗಳ ದೈಹಿಕ ಸಮಸ್ಯೆಯನ್ನು ಗುರುತಿಸಿ, ಅದಕ್ಕನು ಗುಣವಾಗಿ ಚಿಕಿತ್ಸೆ ನೀಡಲಾಗುವುದು ಹಾಗೂ ಮದ್ಯ ಮತ್ತು ಮಾದಕ ದ್ರವ್ಯಗಳಿಂದ ಉಂಟಾಗುವ ಹಾಗೂ ಜೀವನಶೈಲಿ ಬದಲಾವಣೆ ಕುರಿತು ತಜ್ಞರಿಂದ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News