×
Ad

ಮಂಗಳೂರು; ಜೂ.27ರಂದು ನೇರ ಸಂದರ್ಶನ

Update: 2022-06-22 22:07 IST

ಮಂಗಳೂರು; ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವು ಜೂ. 27ರ ಬೆಳಗ್ಗೆ 10ರಿಂದ  ನಡೆಯಲಿದೆ.

ಎಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ ಆಸಕ್ತ ಅಭ್ಯರ್ಥಿಗಳು ಸ್ವವಿವರವುಳ್ಳ ಬಯೋಡೇಟಾದೊಂದಿಗೆ ನಗರದ ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಸಲಾಗುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗೆ ದೂ.ಸಂ:0824-2457139ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News