×
Ad

ಅತಿಥಿ ಶಿಕ್ಷಕರರಿಂದ ಅರ್ಜಿ ಆಹ್ವಾನ

Update: 2022-06-22 22:26 IST

ಮಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೌಲಾನ ಆಜಾದ್ ಮಾದರಿ ಶಾಲೆಗೆ ಪ್ರಸಕ್ತ (2022-23) ಸಾಲಿನಲ್ಲಿ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪುದು ಗ್ರಾಮದ ಮೌಲಾನಾ ಆಝಾದ್ ಮಾದರಿ ಶಾಲೆಗೆ ವಿಜ್ಞಾನ ಮತ್ತು ಗಣಿತ ಶಿಕ್ಷಕರು ಹಾಗೂ ಗುರುಕಂಬಳ ಗ್ರಾಮದ ಮೌಲಾನಾ ಆಝಾದ್ ಮಾದರಿ ಶಾಲೆಗೆ ವಿಜ್ಞಾನ ಶಿಕ್ಷಕರ ಹುದ್ದೆಗಾಗಿ ಬಿಎಸ್ಸಿ, ಬಿಎಡ್ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಜೂ.30ರೊಳಗೆ  ಸ್ವವಿವರವನ್ನು ನಗರದ ಪಾಂಡೇಶ್ವರದಲ್ಲಿರುವ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗೆ ಸಲ್ಲಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News