ಬೆಂಗಳೂರು: ಜೂ.23ರಂದು ಹನ್ಸ್ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಕಟ್ಟಡಕ್ಕೆ ಶಂಕುಸ್ಥಾಪನೆ

Update: 2022-06-22 18:28 GMT

ಬೆಂಗಳೂರು, ಜೂ.22: ರಾಜ್ಯ ವಕ್ಫ್ ಮಂಡಳಿ ವತಿಯಿಂದ ನಗರದ ಎಚ್.ಸಿದ್ದಯ್ಯ ರಸ್ತೆಯಲ್ಲಿರುವ ದರ್ಗಾ ಹಝ್ರತ್ ಅತಾವುಲ್ಲಾ ಶಾ ಮತ್ತು ನಬೀ ಶಾ(ಬಡಾ ಮಕಾನ್) ಆವರಣದಲ್ಲಿ ಜೂ.23ರಂದು ಸಂಜೆ 5 ಗಂಟೆಗೆ ಹನ್ಸ್ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಟ್ಟಡ ಹಾಗೂ ಉರ್ದು ಹಾಲ್ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ.

ರಾಜ್ಯ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದು, ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವಾನ್ವಿತ ಅತಿಥಿಗಳಾಗಿ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಡಾ.ಕೆ.ಸುಧಾಕರ್, ಎಂ.ಟಿ.ಬಿ.ನಾಗರಾಜ್, ಭೈರತಿ ಬಸವರಾಜ ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಚಿಕ್ಕಪೇಟೆ ಕ್ಷೇತ್ರದ ಶಾಸಕ ಉದಯ್ ಬಿ.ಗರುಡಾಚಾರ್, ಇಂಡಿಯಾ ಬಿಲ್ಡರ್ಸ್ ಕಾರ್ಪೋರೇಷನ್ ಮುಖ್ಯಸ್ಥ ಝಿಯಾವುಲ್ಲಾ ಶರೀಫ್ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಹನ್ಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೇಂದ್ರದ ಕಟ್ಟಡ ಹಾಗೂ ಸುಸಜ್ಜಿತವಾದ ಉರ್ದು ಹಾಲ್ ಅನ್ನು ಇಂಡಿಯಾ ಬಿಲ್ಡರ್ಸ್ ಕಾರ್ಪೋರೇಷನ್ ಅಧ್ಯಕ್ಷ ಝಿಯಾವುಲ್ಲಾ ಶರೀಫ್ ತಮ್ಮ ಸಂಸ್ಥೆಯ ಮೂಲಕ ನಿರ್ಮಿಸಿ, ಸಮುದಾಯದ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಕೊಡುಗೆ ನೀಡುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News