ಮಹಾರಾಷ್ಟ್ರದಲ್ಲಿ ಸರಕಾರ ರಚನೆಗೆ ಬಿಜೆಪಿ ಹಕ್ಕು ಮಂಡಿಸುತ್ತಿಲ್ಲ: ಕೇಂದ್ರ ಸಚಿವ ದಾನ್ವೆ

Update: 2022-06-23 04:25 GMT
ರಾವ್ಸಾಹೇಬ್ ಪಾಟೀಲ್ ದಾನ್ವೆ, Photo: twitter

ಮುಂಬೈ: ಮಹಾರಾಷ್ಟ್ರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಶಿವಸೇನೆಯ ಆಂತರಿಕ ವಿಚಾರವಾಗಿದ್ದು,  ರಾಜ್ಯದಲ್ಲಿ ಸರಕಾರ ರಚನೆಗೆ ಬಿಜೆಪಿ ಹಕ್ಕು ಮಂಡಿಸುತ್ತಿಲ್ಲ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಹಾಗೂ  ಕೇಂದ್ರ ಸಚಿವ ರಾವ್ಸಾಹೇಬ್ ಪಾಟೀಲ್ ದಾನ್ವೆ ಬುಧವಾರ ಹೇಳಿದ್ದಾರೆ.

ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ದಾನ್ವೆ,  ಶಿವಸೇನೆಯ ಯಾವುದೇ ಶಾಸಕರು ನಮ್ಮ ಪಕ್ಷದೊಂದಿಗೆ ಸಂಪರ್ಕದಲ್ಲಿಲ್ಲ ಎಂದರು.

"ನಾವು ಏಕನಾಥ್ ಶಿಂಧೆ ಅವರೊಂದಿಗೆ ಮಾತನಾಡಿಲ್ಲ. ಇದು ಶಿವಸೇನೆಯ ಆಂತರಿಕ ವಿಷಯ. ಬಿಜೆಪಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ನಾವು ಸರಕಾರ ರಚನೆಗೆ ಹಕ್ಕು ಸಾಧಿಸುತ್ತಿಲ್ಲ" ಎಂದು ರೈಲ್ವೇ ಖಾತೆ ರಾಜ್ಯ ಸಚಿವ ದಾನ್ವೆ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ತೀವ್ರಗೊಳ್ಳುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆ ಶಿವಸೇನೆಯ ಬಂಡಾಯ ಶಾಸಕ ಏಕನಾಥ್ ಶಿಂಧೆ ಅವರು "ಅಸಹಜ ಮೈತ್ರಿ" ಯಿಂದ ಹೊರಬರುವುದು ಪಕ್ಷದ ಉಳಿವಿಗಾಗಿ ಅತ್ಯಗತ್ಯ  ಎಂದು ಹೇಳಿದ್ದು,ಮೈತ್ರಿ ಸರಕಾರದಲ್ಲಿ  ಕೇವಲ ಮೈತ್ರಿ ಪಕ್ಷಗಳಿಗೆ ಮಾತ್ರ ಲಾಭವಾಗಿದೆ ಎಂದು ಪ್ರತಿಪಾದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News