ವಿದ್ಯಾರ್ಥಿ ನಿಲಯ ಪ್ರವೇಶ: ಅರ್ಜಿ ಆಹ್ವಾನ

Update: 2022-06-23 14:58 GMT

ಉಡುಪಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-೧, ೨ಎ, ೨ಬಿ, ೩ಎ, ೩ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ -www.bcwd.karnataka.gov.in-ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ ೩೦ ಕೊನೆಯ ದಿನ. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ - bcwd.hostels@karnataka.gov.in- ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: ೦೮೦- ೮೦೫೦೩೭೦೦೦೬ ಅನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News