×
Ad

ಡಿಪ್ಲೋಮಾ ಪ್ರವೇಶಾತಿ: ಅವಧಿ ವಿಸ್ತರಣೆ

Update: 2022-06-23 20:32 IST

ಉಡುಪಿ, ಜೂ.೨೩:ಕಾಪುವಿನ ಸರಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳಿಗೆ ಕಡಿಮೆ ಪ್ರವೇಶ ಶುಲ್ಕದೊಂದಿಗೆ ಪ್ರವೇಶ ದಾಖಲಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ ೩೦ರವರೆಗೆ ವಿಸ್ತರಿಸಲಾಗಿದೆ.

ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗೆ ಎಸೆಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ.೩೫ ಅಂಕ ಪಡೆದಿರುವ ಅರ್ಹ ಅಭ್ಯರ್ಥಿಗಳು ಆಟೋಮೇಷನ್ ಅಂಡ್ ರೊಬೋಟಿಕ್ಸ್, ಕ್ಲೌಡ್ ಕಂಪ್ಯೂಟಿಂಗ್ ಅಂಡ್ ಬಿಗ್ ಡೇಟಾ ಎಂಬ ಕೋರ್ಸುಗಳಲ್ಲಿ ಬಾಕಿ ಉಳಿದಿರುವ ಸೀಟುಗಳಿಗೆ ಸೂಕ್ತ ದಾಖಲಾತಿಗಳೊಂದಿಗೆ ನೇರವಾಗಿ ಸಂಸ್ಥೆಯಲ್ಲಿ ಆಫ್‌ಲೈನ್ ಮೂಲಕ ಪ್ರವೇಶ ಪಡೆಯಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಪಾಲಿಟೆಕ್ನಿಕ್, ಕಾಪು ಮೊ.ನಂ: ೯೪೮೦೭೭೩೮೭೦, ೮೦೫೦೦೧೫೫೯೨ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News