ಹೊಸದಾಗಿ ಡಾಂಬರೀಕರಣ ಮಾಡಿದ ರಸ್ತೆ ಕುಸಿತ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿಎಂ ಬೊಮ್ಮಾಯಿ ಸೂಚನೆ

Update: 2022-06-23 15:34 GMT

ಬೆಂಗಳೂರು:  'ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ರಸ್ತೆ ಹಾಕಿದ ಥಾರ್ ಎರಡೇ ದಿನದಲ್ಲಿ ಕಿತ್ತುಹೋಗಿರುವ ಬಗ್ಗೆ ಯಾವ ರಸ್ತೆ ಮತ್ತು ಎಲ್ಲಿ ಕಳಪೆ ಕಾಮಗಾರಿ ಆಗಿದೆ ಎಂಬ ಕುರಿತು ವಿವರಗಳನ್ನು ನೀಡಿದರೆ ಕೂಡಲೇ ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಗುರುವಾರ ದಿಲ್ಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,  ‘ಪ್ರಧಾನಿ ಮೋದಿಯವರು ರಾಜ್ಯ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್(ಬೇಸ್) ಕ್ಯಾಂಪ್ ಬಳಿ ಹೊಸದಾಗಿ ಡಾಂಬರೀಕರಣ ಮಾಡಿದ ರಸ್ತೆ ಕುಸಿದಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಬಿಎಂಪಿ ಆಯುಕ್ತರಿಗೆ ತಾಕೀತು ಮಾಡಲಾಗಿದೆ ಎಂದು ತಿಳಿಸಿದರು.

'ಪ್ರಾಥಮಿಕ ತನಿಖೆಯಿಂದ ಈ ಪ್ರದೇಶದಲ್ಲಿ ನೀರಿನ ಪೈಪ್ ಸೋರಿಕೆಯಿಂದ ರಸ್ತೆ ಕುಸಿದಿರುವುದು ಕಂಡು ಬಂದಿದೆ' ಎಂದು ಬಸವರಾಜ ಬೊಮ್ಮಾಯಿ ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News