ವೇತನಾನುದಾನಕ್ಕೆ ಪರಿಗಣಿಸಲು ಆರ್ಥಿಕ ಇಲಾಖೆ ತೀರ್ಮಾನ

Update: 2022-06-23 16:16 GMT

ಬೆಂಗಳೂರು, ಜೂ. 23: ಕೋವಿಡ್ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಹೊಸದಾಗಿ ವೇತನಾನುದಾನಕ್ಕೆ ಪರಿಗಣಿಸಲು ತೀರ್ಮಾನಿಸಲಾಗಿದೆ ಎಂದು ಆರ್ಥಿಕ ಇಲಾಖೆ ತಿಳಿಸಿದೆ.

2015ರ ಡಿಸೆಂಬರ್ 31ರ ವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಇತ್ಯಾದಿ ಕಾರಣಗಳಿಂದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ತೆರವಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯನ್ನು ಮುಂದುವರಿಸಲು ಆರ್ಥಿಕ ಇಲಾಖೆ ಸಮ್ಮತಿಸಿದೆ. ಆಡಳಿತ ಇಲಾಖೆ ಹಂತದಲ್ಲಿ ವೇತನಾನುದಾನಕ್ಕೆ ಒಳಪಡಿಸಲು ಬಾಕಿ ಇರುವ ಪ್ರಸ್ತಾವನೆಗಳನ್ನು ಆರ್ಥಿಕ ಇಲಾಖೆ ಪರಿಶೀಲನೆಗೆ ಸಲ್ಲಿಸಲು ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News