ರಾಜ್ಯದಲ್ಲಿ ಗುರುವಾರ 858 ಮಂದಿಗೆ ಕೊರೋನ ದೃಢ, ಓರ್ವ ಮೃತ್ಯು

Update: 2022-06-23 17:07 GMT

ಬೆಂಗಳೂರು, ಜೂ.23: ರಾಜ್ಯದಲ್ಲಿ ಗುರುವಾರ 858 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಒಬ್ಬರು ಮೃತಪಟ್ಟಿದ್ದು, 682 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,63,633ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,072ಕ್ಕೆ ತಲುಪಿದೆ.        
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 5,067ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 858 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 1, ಬೆಂಗಳೂರು ಗ್ರಾಮಾಂತರ 1, ಬೆಂಗಳೂರುನಗರ 820, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 1, ದಕ್ಷಿಣಕನ್ನಡ 7, ಧಾರವಾಡ 2, ಹಾಸನ 3, ಕಲಬುರಗಿ 1, ಕೋಲಾರ 3, ಮಂಡ್ಯ 2, ಮೈಸೂರು 7, ರಾಯಚೂರು 2, ಶಿವಮೊಗ್ಗ 1, ತುಮಕೂರು 2, ಉಡುಪಿ 2, ಉತ್ತರಕನ್ನಡ 1, ಯಾದಗಿರಿ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿವೆ. ಒಬ್ಬರ ಸಾವು: ಬೆಂಗಳೂರು ನಗರದಲ್ಲಿ ಒಬ್ಬರು ಕೋವಿಡ್‍ನಿಂದ ಮೃತಪಟ್ಟಿದ್ದಾರೆ. 
 
ರಾಜಧಾನಿಯಲ್ಲಿ 820 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಗುರುವಾರದಂದು 820 ಜನರಿಗೆ ಕೊರೋನ ಸೋಂಕು ದೃಢಪಟ್ಟಿವೆ. ಒಬ್ಬರು ಮೃತಪಟ್ಟಿದ್ದು, 666 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 17,98,680   ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,967 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News