ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ದ್ರೌಪದಿ ಮುರ್ಮು

Update: 2022-06-24 07:31 GMT
Photo: Twitter/ANI

ಹೊಸದಿಲ್ಲಿ: ಬಿಜೆಪಿ ನೇತೃತ್ವದ ಎನ್‌ಡಿಎನ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ತಮ್ಮ ನಾಮಪತ್ರವನ್ನು ಸಲ್ಲಿಸಿದರು.

ಒಡಿಶಾದ ಸಂತಾಲ್ ಬುಡಕಟ್ಟಿಗೆ ಸೇರಿದ ದ್ರೌಪದಿ ಮುರ್ಮು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ ಕಣಕ್ಕಿಳಿದಿದ್ದಾರೆ.

ನವೀನ್ ಪಟ್ನಾಯಕ್ ಅವರ ಬಿಜು ಜನತಾ ದಳ ಹಾಗೂ  ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್ ಕಾಂಗ್ರೆಸ್‌ನಂತಹ ಪಕ್ಷಗಳು ಜಾರ್ಖಂಡ್ ಮಾಜಿ ರಾಜ್ಯಪಾಲರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಲು ತಮ್ಮ ಬೆಂಬಲ ಸೂಚಿಸಿವೆ.

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರ ರಾಜಧಾನಿಯಲ್ಲಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ಅವರ ರಾಷ್ಟ್ರಪತಿ ನಾಮನಿರ್ದೇಶನಕ್ಕೆ  ಭಾರತದಾದ್ಯಂತ ಸಮಾಜದ ಎಲ್ಲಾ ವರ್ಗಗಳಿಂದ ಪ್ರಶಂಸಿಸಲಾಗಿದೆ ಎಂದು ಪ್ರಧಾನಿ ಹೇಳಿದರು

ಪ್ರಧಾನಿಯವರಲ್ಲದೆ, ಹಿರಿಯ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಹಾಗೂ  ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ನಾಮಪತ್ರಕ್ಕೆ ಸಹಿ ಹಾಕಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News