ಭಟ್ಕಳದಲ್ಲಿ ಹುಚ್ಚುನಾಯಿಗಳ ಹಾವಳಿ; ಕ್ರಮಕ್ಕಾಗಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಆಗ್ರಹ

Update: 2022-06-24 10:36 GMT

ಭಟ್ಕಳ: ಕಳೆದ ಹಲವು ದಿನಗಳಲ್ಲಿ ಭಟ್ಕಳದಲ್ಲಿ ಬೀದಿ ನಾಯಿ ಮತ್ತು ಹುಚ್ಚುನಾಯಿಗಳ ಹಾವಳಿ ಹೆಚ್ಚಾಗಿದ್ದು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉತ್ತರಕನ್ನಡ ಜಿಲ್ಲಾ ನಿಯೋಗವೊಂದು ಪುರಸಭೆ ಮುಖ್ಯಾಧಿಕಾರಿಯೊಂದಿಗೆ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿತು. 

ಭಟ್ಕಳದಲ್ಲಿ ಇತ್ತೀಚೆಗೆ ಹಲವು ಕಡೆ ಹುಚ್ಚು ನಾಯಿಗಳು ಹಾಗು ಬೀದಿ ನಾಯಿಗಳು ಅಮಾಯಕ ಪುರುಷರು ಮಹಿಳೆಯರು ಮತ್ತು ಮಕ್ಕಳ ಮೇಲೆ ಆಕ್ರಮಣ ಮಾಡುತ್ತಿವೆ. ಕೆಲ ದಿನಗಳ ಹಿಂದೆಯೂ ನಾಲ್ಕೈದು  ವ್ಯಕ್ತಿಗಳ ಮೇಲೆ ಹುಚ್ಚು ನಾಯಿಗಳು ದಾಳಿ ಮಾಡಿದ್ದು ಶುಕ್ರವಾರವು ಸಹ ಒಂದು ಮಗುವೂ ಸೇರಿ ಮೂರು ಜನರ ಮೇಲೆ ಹುಚ್ಚು ನಾಯಿ ದಾಳಿ ಮಾಡಿದೆ. ಹುಚ್ಚು ನಾಯಿಗಳ ಕಡಿತ ಅಪಾಯಕಾರಿಯಾಗಿದ್ದು ಇದನ್ನು ಗಂಭೀರವಾಗಿ ತೆಗೆದುಕೊಂಡು ಸೂಕ್ತಕ್ರಮ ಕೈಗೊಳ್ಳಬೇಕೆಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭ ಪುರಸಭಾಧ್ಯಕ್ಷ ಪರ್ವೆಝ್ ಕಾಶಿಮಜಿಯವರನ್ನೂ ಭೇಟಿಯಾದ ವೆಲ್ಫೇರ್ ಪಾರ್ಟಿಯ ನಿಯೋಗ ಅವರೊಂದಿಗೂ ಮಾತನಾಡಿ ಸಮಸ್ಯೆಗೆ ಪರಿಹಾರ ಒದಗಿಸುವಂತೆ ಕೇಳಿಕೊಂಡಿದ್ದಾರೆ. 

ನಿಯೋಗದಲ್ಲಿ ಜಿಲ್ಲಾಧ್ಯಕ್ಷ ಅಬ್ದುಲ್ ಮಜೀದ್ ಕೋಲಾ, ಪ್ರಧಾನ ಕಾರ್ಯದರ್ಶಿ ಆಸಿಫ್ ಶೇಖ್, ಉಪಾಧ್ಯಕ್ಷ ಶೌಕತ್ ಖತೀಬ್ ಮುಖಂಡರಾದ ಅಬ್ದುಲ್ ಜಬ್ಬಾರ್ ಅಸದಿ ಮತ್ತಿತರರು ಇದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News