ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Update: 2022-06-24 11:58 GMT

ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ ಪೋಕ್ಸೋ ನ್ಯಾಯಾಲಯದಲ್ಲಿ ಶಿಕ್ಷೆ ಪ್ರಕಟವಾಗಿದೆ. ಶಿವಮೊಗ್ಗ ಪೋಕ್ಸೋ ನ್ಯಾಯಾಲಯದ ನ್ಯಾ. ಮೋಹನ್ ಜೆ.ಎಸ್ ಅವರಿಂದ ಮಹತ್ವದ ಆದೇಶ ಹೊರಬಿದ್ದಿದೆ.

ಅಪರಾಧಿಗೆ 20 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 6 ತಿಂಗಳ ಕಾಲ ಸಾದಾ ಕಾರಗೃಹ ಶಿಕ್ಷೆ ವಿಧಿಸಲಾಗಿದೆ.

ಭದ್ರಾವತಿಯ ಲಿಂಗರಾಜ್ ಅಲಿಯಾಸ್ ನವೀನ್ (18) ಶಿಕ್ಷೆಗೆ ಒಳಪಟ್ಟ ಆರೋಪಿ.

2019ರ ಫೆಬ್ರವರಿ 10ರಂದು ಲಿಂಗರಾಜ್ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಭದ್ರಾವತಿ ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News