ಉತ್ತಮ ಆರೋಗ್ಯದಿಂದ ಉತ್ತಮ ಕಾರ್ಯನಿರ್ವಹಣೆ ಸಾಧ್ಯ: ಉಡುಪಿ ಸಿಇಓ

Update: 2022-06-24 14:57 GMT

ಉಡುಪಿ: ಸರಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಉತ್ತಮ ಜೀವನ ಶೈಲಿಯನ್ನು ರೂಪಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಹಾಗೂ ಅತ್ಯುತ್ತಮ ಕಾರ್ಯನಿರ್ವಹಣೆ ಮಾಡಲು ಸಾಧ್ಯ ಎಂದು ಉಡುಪಿ ಜಿಪಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್. ಹೇಳಿದ್ದಾರೆ. 

ಮಣಿಪಾಲದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ನಡೆದ ಆರೋಗ್ಯ ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.  

ಕಾರ್ಯಕ್ರಮದಲ್ಲಿ ಡಾ.ವೆಂಕಟರಮಣ ಹೆಗಡೆ ಮಾತನಾಡಿ, ಆಧುನಿಕ ವಿಜ್ಞಾನ ಮತ್ತು ಪುರಾತನ ಜ್ಞಾನಗಳ ಉತ್ತಮ ಸಮನ್ವಯದಿಂದ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು. ಆಹಾರ ಪದ್ಧತಿ, ಉಪವಾಸದ ಮಹತ್ವ, ಪೌಷ್ಠಿಕ ಆಹಾರ, ವರ್ಜಿಸಬೇಕಾದ ಆಹಾರ, ಮಧುಮೇಹ, ಅಧಿಕ ರಕ್ತದೊತ್ತಡಗಳನ್ನು ದೂರಗೊಳಿಸುವ ವಿಧಾನಗಳು ಸೇರಿದಂತೆ ಪ್ರಕೃತಿದತ್ತವಾಗಿ ಆರೋಗ್ಯ ವೃದ್ಧಿಸುವ ಜೀವನಶೈಲಿಯನ್ನು ಹೊಂದುವ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಪಂನ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಸತೀಶ್ ಆಚಾರ್ಯ್, ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್ ಹಾಗೂ ವಿವಿಧ ಇಲಾಖೆಗ  ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News