ರಾಹುಲ್‌ ಗಾಂಧಿ ಕಚೇರಿ ಧ್ವಂಸಗೊಳಿಸಿದವರ ವಿರುದ್ಧ ಕಠಿಣ ಕ್ರಮ: ಕೇರಳ ಸಿಎಂ ಪಿಣರಾಯಿ ವಿಜಯನ್

Update: 2022-06-24 15:04 GMT

ವಯನಾಡ್:‌ ಇಲ್ಲಿನ ಸಂಸದರಾಗಿರುವ ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿಯವರ ಕಚೇರಿಯನ್ನು ಕೆಲ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದರು. ಈ ಘಟನೆಯ ಹಿಂದೆ ಆಡಳಿತಾರೂಢ ಸಿಪಿಐಎಂ ಪಕ್ಷದ ವಿದ್ಯಾರ್ಥಿ ಸಂಘಟನೆಯಾಗಿರುವ ಎಸ್‌ಎಫ್‌ಐ ಕೈವಾಡವಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು. ಇದೀಗ ಈ ಘಟನೆಯ ಕುರಿತು ಖಂಡನೆ ವ್ಯಕ್ತಪಡಿಸಿರುವ ಕೇರಳ ಸಿಎಂ ಪಿಣರಾಯಿ ವಿಜಯನ್‌ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

"ರಾಹುಲ್ ಗಾಂಧಿಯವರ ಕಚೇರಿ ಮೇಲೆ ನಡೆದ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ನಮ್ಮ ದೇಶದಲ್ಲಿ, ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಮತ್ತು ಪ್ರಜಾಸತ್ತಾತ್ಮಕವಾಗಿ ಪ್ರತಿಭಟಿಸಲು ಹಕ್ಕಿದೆ. ಆದರೂ, ಇದು ಮಿತಿಮೀರಿರಬಾರದು. ಅದೊಂದು ತಪ್ಪು ಪ್ರವೃತ್ತಿವಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ಪಿಣರಾಯಿ ವಿಜಯನ್‌ ಹೇಳಿದ್ದಾಗಿ ANI ವರದಿ ಮಾಡಿದೆ.

"ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಎಸ್‌ಎಫ್‌ಐ ಕಾರ್ಯಕರ್ತರು ಮತ್ತು ಮುಖಂಡರ ಗುಂಪು ವಯನಾಡ್ ಸಂಸದ ರಾಹುಲ್ ಗಾಂಧಿ ಅವರ ಕಚೇರಿಗೆ ಬಲವಂತವಾಗಿ ನುಗ್ಗಿದ್ದು, ಕಚೇರಿಯಲ್ಲಿದ್ದವರ ಹಾಗೂ ರಾಹುಲ್ ಗಾಂಧಿ ಅವರ ಸಿಬ್ಬಂದಿ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಕೆ.ಸಿ ವೇಣುಗೋಪಾಲ್‌ ಆರೋಪಿಸಿದ್ದರು. ಘಟನೆಗೆ ಸಂಬಂಧಿಸಿದ ವೀಡಿಯೋಗಳು ಸಾಮಾಜಿಕ ತಾಣದಲ್ಲಿ ವೈರಲ್‌ ಆಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News