ಉಡುಪಿ ಜಿಲ್ಲೆಯ ಮೂವರಲ್ಲಿ ಕೋವಿಡ್ ಸೋಂಕು ಪತ್ತೆ

Update: 2022-06-24 15:21 GMT

ಉಡುಪಿ : ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ ಮೂವರಲ್ಲಿ  ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿರುವ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಈಗ ೧೦ಕ್ಕೇರಿದೆ. 

ದಿನದಲ್ಲಿ ಇಬ್ಬರು ಪುರುಷರು ಹಾಗೂ ಒಬ್ಬ ಮಹಿಳೆಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದು, ಇವರಲ್ಲಿ ಇಬ್ಬರು ಉಡುಪಿ ತಾಲೂಕಿನವರಾದರೆ ಒಬ್ಬರು ಕುಂದಾಪುರ ತಾಲೂಕಿನವರು. ಇವರಲ್ಲಿ ಇಬ್ಬರು ಕೋವಿಡ್ ಆಸ್ಪತ್ರೆಗೆ ದಾಖಲಾದರೆ, ಒಬ್ಬರು ತಮ್ಮ ಮನೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಇಂದು ಇಬ್ಬರು ಸೋಂಕಿನಿಂದ ಗುಣಮುಖ ರಾಗಿದ್ದಾರೆ. 

ಜಿಲ್ಲೆಯಲ್ಲಿ ಇಂದು ಒಟ್ಟು 220 ಮಂದಿಯನ್ನು ಕೋವಿಡ್ ಪರೀಕ್ಷೆ ಗೊಳಪಡಿಸಲಾಗಿದ್ದು, ಉಡುಪಿ ತಾಲೂಕಿನ ೧೬೫ ಮಂದಿಯಲ್ಲಿ ಇಬ್ಬರು ಪಾಸಿಟಿವ್ ಬಂದಿದ್ದರೆ ಕುಂದಾಪುರ ತಾಲೂಕಿನ ೩೪ ಮಂದಿಯಲ್ಲಿ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಕಾರ್ಕಳ ತಾಲೂಕಿನ ೨೧ ಮಂದಿಯಲ್ಲಿ ಯಾರಲ್ಲೂ ಸೋಂಕು ಕಂಡುಬಂದಿಲ್ಲ. 

೨೪೨೨ ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು ೨೪೨೨ ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ ೪೩ ಮಂದಿ ೧೨ರಿಂದ ೧೪ ವರ್ಷದೊಳಗಿನ ಮಕ್ಕಳೂ ಸೇರಿದ್ದಾರೆ. ೨೦ ಮಕ್ಕಳಿಗೆ ಮೊದಲ ಡೋಸ್ ನೀಡಿದ್ದರೆ, ೨೩ ಮಂದಿ ಮಕ್ಕಳು ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ೧೫ರಿಂದ ೧೮ ವರ್ಷದೊಳಗಿನ ೪೯,೨೦೦ ಮಂದಿ ಈಗಾಗಲೇ ಮೊದಲ ಡೋಸ್ ಪಡೆದಿದ್ದರೆ, ೪೮,೧೦೦ ಮಂದಿ ಎರಡನೇ ಡೋಸ್ ಲಸಿಕೆಯನ್ನು ತೆಗೆದುಕೊಂಡಿದ್ದಾರೆ. ಇಂದು ೨೦೪೪ ಮಂದಿ ಸೇರಿದಂತೆ ೬೦ ವರ್ಷ ಮೇಲಿನ ೬೯,೩೦೪ ಮಂದಿ ಹಿರಿಯ ನಾಗರಿಕರು ಸಹ ಮುನ್ನೆಚ್ಚರಿಕೆ ಲಸಿಕೆಯನ್ನು ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News