ಜುಲೈ 3: ದೇರಳಕಟ್ಟೆಯಲ್ಲಿ ಬ್ಲಡ್ ಡೋನರ್ಸ್ ಮಂಗಳೂರು ವತಿಯಿಂದ 350 ನೇ ರಕ್ತದಾನ ಶಿಬಿರ

Update: 2022-06-24 16:24 GMT

ಮಂಗಳೂರು: ಬ್ಲಡ್ ಡೋನರ್ಸ್ ಮಂಗಳೂರು (ರಿ) ವತಿಯಿಂದ ರೆಡ್ ಕ್ರಾಸ್ ರಕ್ತನಿಧಿ ಕೇಂದ್ರ ಮಂಗಳೂರು, ಫಾದರ್ ಮುಲ್ಲರ್ ರಕ್ತನಿಧಿ ಕೇಂದ್ರ ಮಂಗಳೂರು, ಯೆನೆಪೋಯಾ ಮೆಡಿಕಲ್ ಕಾಲೇಜು ರಕ್ತನಿಧಿ ಕೇಂದ್ರ ದೇರಳಕಟ್ಟೆ ಸಹಯೋಗದೊಂದಿಗೆ 350 ನೇ ಬೃಹತ್ ರಕ್ತದಾನ ಶಿಬಿರ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ.

 "ಸಾಧನೆಯ ಹಾದಿಯಲ್ಲಿ ಬಿ.ಡಿ.ಎಂ ಹೆಜ್ಜೆ, ಕರಾವಳಿಯ ಚರಿತ್ರೆಯ ಪುಟಗಳಿಗೆ ಮತ್ತೊಂದು ಗರಿ" ಎಂಬ ಧ್ಯೇಯದೊಂದಿಗೆ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ‌ ದಾಖಲೆಯ 350 ನೇ ಬೃಹತ್ ರಕ್ತದಾನ ಶಿಬಿರ ಮತ್ತು ಸನ್ಮಾನ ಕಾರ್ಯಕ್ರಮ ಜುಲೈ 3ರಂದು ವಂಡರ್ ಸಿಟಿ ನಾಟೆಕಲ್ ದೇರಳಕಟ್ಟೆಯಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಘಂಟೆಯವರೆಗೆ ಜರುಗಲಿದೆ. ಮುಖ್ಯ ಅತಿಥಿಗಳಾಗಿ ಜಿಲ್ಲೆಯ ರಾಜಕೀಯ ಮತ್ತು ಸಾಮಾಜಿಕ ಮುಖಂಡರು ಭಾಗವಹಿಸಲಿದ್ದಾರೆ.

ಕಳೆದ ಒಂಭತ್ತು ವರ್ಷಗಳಿಂದ ಸೇವಾ ರಂಗದಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಯು ಹಲವು ರಕ್ತದಾನ ಶಿಬಿರ ಮಾತ್ರವಲ್ಲದೆ ಸಾಮಾಜಿಕ ಸೇವೆಯಲ್ಲೂ ಮುಂದುವರಿದಿದೆ. ಕಾರ್ಯಕ್ರಮದಲ್ಲಿ ನಾಗರಿಕರು ಮತ್ತು ರಕ್ತದಾನಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ನವಾಝ್ ಕಲ್ಲರಕೋಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News