ಜೂ.27-ಜು.4: ಎಸ್ಸೆಸೆಲ್ಸಿ ಪೂರಕ ಪರೀಕ್ಷೆ; ನಿಷೇಧಾಜ್ಞೆ ಜಾರಿ

Update: 2022-06-24 16:28 GMT

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಲ್ಲಿ ಜೂ.೨೭ರಿಂದ ಜುಲೈ ೪ರವರೆಗೆ ಎಸ್ಸೆಸೆಲ್ಸಿ ಪೂರಕ ಪರೀಕ್ಷೆ ನಡೆಯಲಿರುವುದರಿಂದ ಪರೀಕ್ಷಾ ಕೇಂದ್ರಗಳ ೨೦೦ ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮಂಗಳೂರಿನ ಬೋಳಾರ ಸೈಂಟ್ ಆ್ಯನ್ಸ್ ಪ್ರೌಢ ಶಾಲೆ, ಮೂಡುಬಿದಿರೆಯ ಜೈನ್ ಹೈಸ್ಕೂಲ್, ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲೆ, ಉಳ್ಳಾಲ ತೊಕ್ಕೊಟ್ಟಿನ ಪೆರ್ಮನ್ನೂರು ಸೈಂಟ್ ಸೆಬಾಸ್ಟಿಯನ್ ಪ್ರೌಢಶಾಲೆ, ಮಂಗಳೂರಿನ ರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆ, ನಂತೂರು ಪದುವಾ ಹೈಸ್ಕೂಲ್, ಕುಲಶೇಖರ ಸೇಕ್ರೆಡ್ ಹಾರ್ಟ್ ಪ್ರೌಢಶಾಲೆ ಈ ಶಿಕ್ಷಣ ಸಂಸ್ಥೆಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಜಿಲ್ಲಾಡಳಿತದ ಸೂಚನೆ ಯಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತ ಹರಿರಾಂ ಶಂಕರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News