ಸಾರ್ವಜನಿಕ ಶಿಕ್ಷಣ ಇಲಾಖೆ ಇನ್ನೂ 'ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ'

Update: 2022-06-25 10:47 GMT
ಸಾಂದರ್ಭಿಕ ಚಿತ್ರ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಹೆಸರನ್ನು 'ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ' ಎಂದು ಮರುನಾಮಕರಣ ಮಾಡಲಾಗಿದೆ. 

ಈ ಸಂಬಂಧ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಎಚ್.ಎಸ್ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. 

ದೇಶದ ಬಹುತೇಕ ಎಲ್ಲ ರಾಜ್ಯಗಳಲ್ಲಿ 12ನೇ ತರಗತಿಯವರೆಗಿನ ಶಿಕ್ಷಣವು ಶಾಲಾ ಶಿಕ್ಷಣದ ವ್ಯಾಪ್ತಿಗೆ ಒಳಪಡುತ್ತದೆ. 'ರಾಷ್ಟ್ರೀಯ ಶಿಕ್ಷಣ ನೀತಿ-2020ರಲ್ಲಿಯೂ ಈ ಅಂಶವನ್ನು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ  ಎರಡೂ ಇಲಾಖೆಗಳನ್ನು ಒಟ್ಟುಗೂಡಿಸಿ 'ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ' ಎಂದು ಮರುನಾಮಕಾರಣ ಮಾಡಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News