ಪೊಲೀಸ್ ಕಾನ್ಸ್ ಟೆಬಲ್ ವರ್ಗಾವಣೆ ಪ್ರಕ್ರಿಯೆಯಲ್ಲಿ ಬದಲಾವಣೆ; ಸೇವಾವಧಿ 6 ವರ್ಷದಿಂದ 5 ವರ್ಷಕ್ಕೆ ಬದಲಾಯಿಸಿ ಆದೇಶ

Update: 2022-06-24 16:48 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.24: ರಾಜಧಾನಿಯಲ್ಲಿ ಪೊಲೀಸ್ ಕಾನ್ಸ್‍ಟೇಬಲ್ ವರ್ಗಾವಣೆ ಪ್ರಕ್ರಿಯೆಯಲ್ಲಿ ಬದಲಾವಣೆ ತರಲಾಗಿದ್ದು, ಒಂದೇ ಸ್ಥಳದಲ್ಲಿ ಕನಿಷ್ಠ ಸೇವಾವಧಿ 6 ವರ್ಷದಿಂದ 5 ವರ್ಷಕ್ಕೆ ಇಳಿಕೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಆದೇಶ ಹೊರಡಿಸಿದ್ದಾರೆ.

ನಗರದ ಕಮಿಷನರೇಟ್ ವ್ಯಾಪ್ತಿಯ ಕಾನ್ಸ್‍ಟೇಬಲ್‍ಗಳಿಗೆ ಈ ಆದೇಶ ಅನ್ವಯಿಸಲಿದೆ. ಒಂದೇ ಕಡೆಗಳಲ್ಲಿ ಹಲವು ವರ್ಷಗಳಿಂದ ಕಾನ್ಸ್‍ಟೇಬಲ್ಸ್ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕನಿಷ್ಠ 6 ವರ್ಷದಿಂದ 5 ವರ್ಷಕ್ಕೆ ಕಡಿತಗೊಳಿಸಿ ಆದೇಶ ಹೊರಡಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News