ಮೋದಿಜಿ 19 ವರ್ಷಗಳ ಕಾಲ ಸುಳ್ಳು ಆರೋಪ ಸಹಿಸಿಕೊಂಡರು: ಅಮಿತ್ ಶಾ

Update: 2022-06-25 05:27 GMT
Photo:PTI

ಹೊಸದಿಲ್ಲಿ, ಜೂ.25: ಕಾನೂನು ಪ್ರಕ್ರಿಯೆ ನಡೆಯುತ್ತಿದ್ದ ಕಾರಣ ಪ್ರಧಾನಿ ನರೇಂದ್ರ ಮೋದಿಜಿ 2002ರ ಗುಜರಾತ್ ಗಲಭೆಗೆ ಸಂಬಂಧಿಸಿದ ಸುಳ್ಳು ಆರೋಪಗಳನ್ನು 19 ವರ್ಷಗಳ ಕಾಲ ಮೌನವಾಗಿ ಸಹಿಸಿಕೊಂಡಿದ್ದಾರೆ. ಯಾರೂ ಕೂಡ  ಈ ಕುರಿತು ಧರಣಿ ಮಾಡಲಿಲ್ಲ ಎಂದು ಸುದ್ದಿಸಂಸ್ಥೆ  ANI ಗೆ  ನೀಡಿದ ಸಂದರ್ಶನವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.

ಗುಜರಾತ್ ಗಲಭೆಗೆ ಸಂಬಂಧಿಸಿ ಸುಪ್ರೀಂಕೋರ್ಟ್ ಶುಕ್ರವಾರ ನರೇಂದ್ರ ಮೋದಿಗೆ ಕ್ಲೀನ್ ಚಿಟ್ ನೀಡಿರುವ ಹಿನ್ನೆಲೆಯಲ್ಲಿ ಶಾ ಈ ಹೇಳಿಕೆ ನೀಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿಯ ವಿಚಾರಣೆಯನ್ನು ಖಂಡಿಸಿ  ದಿನಗಟ್ಟಲೆ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News