PSI ನೇಮಕಾತಿ ಪ್ರಕರಣ: ಡಿವೈಎಸ್ಪಿ ಸೇರಿ ಮೂವರು ಸಿಐಡಿ ಕಸ್ಟಡಿಗೆ

Update: 2022-06-25 12:12 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.25: ಪಿಎಸ್ಸೈ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ಮೂವರು ಆರೋಪಿಗಳನ್ನು ಸಿಐಡಿ ಕಸ್ಟಡಿಗೆ ಪಡೆದಿದೆ ಎಂದು ತಿಳಿದುಬಂದಿದೆ. 

ಡಿವೈಎಸ್ಪಿ ಶಾಂತಕುಮಾರ್, ಹೆಡ್ ಕಾನ್‍ಸ್ಟೇಬಲ್ ಶ್ರೀಧರ್ ಹಾಗೂ ಶ್ರೀನಿವಾಸ ಅವರನ್ನ ಜೂ.29ರವರೆಗೆ ಸಿಐಡಿ ಕಸ್ಟಡಿಗೆ ಪಡೆದಿದ್ದು, ಹೆಚ್ಚಿನ ವಿಚಾರಣೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.

ಮತ್ತೊಂದೆಡೆ ಜೂ.27(ಸೋಮವಾರ) ಪುನಃ ಎಡಿಜಿಪಿ ಅಮೃತ್ ಪಾಲ್ ಅವರನ್ನು ವಿಚಾರಣೆಗೆ ಕರೆದು ಮುಖಾಮುಖಿ ಆರೋಪಿಗಳೆದುರು ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದ್ದು, ಯಲಹಂಕ ನ್ಯೂಟೌನ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‍ಐಆರ್ ಸಂಬಂಧ ಬಂಧಿತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News