ಮಹಿಳಾ ಪದವೀಧರರಿಗೆ ಉದ್ಯಮಶೀಲತಾ ತರಬೇತಿ

Update: 2022-06-25 12:41 GMT

ಉಡುಪಿ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳಾ ಪದವೀಧರರು ಉದ್ಯಮಗಳನ್ನು ಸ್ಥಾಪಿಸಲು ಪೂರಕವಾಗುವಂತೆ ಬೆಂಗಳೂರಿನ ಐಐಎಂನಲ್ಲಿ ಉಚಿತ ಉದ್ಯಮಶೀಲತಾ ತರಬೇತಿಗಾಗಿ ಇಲಾಖೆಯ ವೆಬ್‌ಸೈಟ್ -www.sw.kar.nic.in-ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ ೧೮ ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ: ೯೪೮೨೩೦೦೪೦೦ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News