ಉಡುಪಿ ವಲಯ ಯಕ್ಷಗಾನ ತರಬೇತಿ ಉದ್ಘಾಟನೆ

Update: 2022-06-25 12:50 GMT

ಉಡುಪಿ : ಉಡುಪಿ ಯಕ್ಷ ಶಿಕ್ಷಣ ಟ್ರಸ್ಟ್ ಇದರ ೨೦೨೨-೨೩ನೇ ಉಡುಪಿ ವಲಯದ ಯಕ್ಷಗಾನ ತರಬೇತಿ ಉದ್ಘಾಟನೆ ಇಂದು ಉಡುವಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ತರಬೇತಿಯನ್ನು ಉದ್ಘಾಟಿಸಿದ ಯಕ್ಷ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಹಾಗೂ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಕಳೆದ ೧೬ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಪ್ರೌಢಶಾಲಾ ವಿದ್ಯಾರ್ಥಿಗಳ ಯಕ್ಷಗಾನ ತರಬೇತಿ ತರಗತಿಗಳು ಈ ವರ್ಷ ಸುಮಾರು ೫೦ ಪ್ರೌಢ ಶಾಲೆಗಳಲ್ಲಿ ನಡೆಯಲಿವೆ. ಈಗಾಗಲೇ ಈ ಕಾಲೇಜಿನ ನೂರಕ್ಕೂ ಅಧಿಕ ವಿದ್ಯಾರ್ಥಿನಿಯರು ಹೆಸರು ನೊಂದಾಯಿಸಿರುವುದ ರಿಂದ ಎರಡು ವಿಭಾಗಗಳಲ್ಲಿ ತರಬೇತಿ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಟ್ರಸ್ಟ್ ಸದಸ್ಯ ನಾರಾಯಣ ಹೆಗಡೆ, ಯಕ್ಷಗಾನ ತರಬೇತಿದಾರ ರಾದ ಕೀರ್ತನಾ ಉದ್ಯಾವರ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ತಾರಾದೇವಿ ಉಪಸ್ಥಿತರಿದ್ದರು.

ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್ ಸ್ವಾಗತಿಸಿ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಸ್ವಾಗತಿಸಿದರು. ಶಿಕ್ಷಕಿ ಉಷಾ ಕುಮಾರಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News