ಬೆಂಗಳೂರು | ಅಕ್ರಮ ಹಣ ವರ್ಗಾವಣೆ ಆರೋಪ: ಮಂತ್ರಿ ಗ್ರೂಪ್ ಎಂಡಿ ಬಂಧನ

Update: 2022-06-25 15:38 GMT

ಬೆಂಗಳೂರು, ಜೂ.25: ಹೆಸರಾಂತರಿಯಲ್ ಎಸ್ಟೇಟ್ ಕಂಪೆನಿಮಂತ್ರಿ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಸುಶೀಲ್ ಪಾಂಡುರಂಗ್ ಅವರನ್ನು ಜಾರಿ ನಿರ್ದೇಶನಾಲಯ(ಈಡಿ) ಬಂಧಿಸಿದೆ ಎಂದು ತಿಳಿದುಬಂದಿದೆ.

ದಾಖಲೆ ಇಲ್ಲದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.24ರಂದು ಹಾಜರಾಗುವಂತೆ ಈಡಿ ಸಮನ್ಸ್ ಜಾರಿ ಮಾಡಿತ್ತು. ಅದರಂತೆ ವಿಚಾರಣೆಗೆ ಹಾಜರಾಗಿದ್ದ ಸುಶೀಲ್ ಪಾಂಡುರಂಗ್‍ನನ್ನು ಈ.ಡಿ ಅಧಿಕಾರಿಗಳು ಬಂಧಿಸಿದ್ದಾರೆ. ಬಳಿಕ ಶನಿವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಹತ್ತು ದಿನಗಳ ಕಾಲ ಕಸ್ಟಡಿಗೆ ಪಡೆಯಲಾಗಿದೆ.

ಇಲ್ಲಿನ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಬಂಧಿತನ ಮೇಲೆ ವಂಚನೆ ಪ್ರಕರಣ ದಾಖಲಾಗಿತ್ತು. ಅಲ್ಲದೆ, ತೆರಿಗೆ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಮಂತ್ರಿ ಗ್ರೂಪ್ ಕಟ್ಟಡಗಳ ಮೇಲೆ ದಾಳಿ ಮಾಡಿತ್ತು.

ಈ ಸಂದರ್ಭದಲ್ಲಿ ಬಹುತೇಕ ವ್ಯವಹಾರಗಳು ನಗದು ರೂಪದಲ್ಲಿ ನಡೆದಿರುವುದು ಬೆಳಕಿಗೆ ಬಂದಿತ್ತು. ಸಾಕಷ್ಟು ಜನರಿಗೆ ಮಂತ್ರಿ ಗ್ರೂಪ್‍ನಲ್ಲಿ ಫ್ಲಾಟ್ ಮಾರಾಟ ಮಾಡಿದ್ದರೂ ಹಣಕಾಸು ವ್ಯವಹಾರದಲ್ಲಿ ಸಾಕಷ್ಟು ವ್ಯತ್ಯಾಸ ಕಂಡು ಬಂದಿತ್ತು. ಆ ಹಣದ ವ್ಯವಹಾರದ ಬಗ್ಗೆ ಈಡಿ ಅಧಿಕಾರಿಗಳಿಗೆ ಸೂಕ್ತ ದಾಖಲೆ ಕೊಡುವಲ್ಲಿ ಸುಶೀಲ್ ಪಾಂಡುರಂಗ್ ವಿಫಲರಾಗಿದ್ದರು. ಈ ಕಾರಣಕ್ಕೆ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸಮನ್ಸ್ ಜಾರಿಯಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News