×
Ad

​ವಯನಾಡ್: ರಾಹುಲ್ ಗಾಂಧಿ ಕಚೇರಿ ಮೇಲೆ ದಾಳಿ; ಎಸ್‌ಎಫ್‌ಐಯ 19 ಕಾರ್ಯಕರ್ತರ ಬಂಧನ

Update: 2022-06-25 21:27 IST
Image Source : TWITTER@SUPRIYASHRINATE

ವಯನಾಡ್, ಜೂ. 25: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ  ಅವರ ಇಲ್ಲಿನ ಕಚೇರಿ ಮೇಲೆ ನಡೆದ ದಾಳಿಗೆ ಸಂಬಂಧಿಸಿ ಆಡಳಿತಾರೂಢ ಸಿಪಿಐ (ಎಂ)ನ ವಿದ್ಯಾರ್ಥಿ ಘಟಕ ಎಸ್‌ಎಫ್‌ಐಯ 19 ಕಾರ್ಯಕರ್ತರನ್ನು ಬಂಧಿಸಲಾಗಿದೆ ಹಾಗೂ ರಿಮಾಂಡ್ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಎಲ್ಲರೂ ಸ್ಥಳೀಯ ಎಸ್‌ಎಫ್‌ಐ ಕಾರ್ಯಕರ್ತರು. ಇವರಿಗೆ ಸ್ಥಳೀಯ ನ್ಯಾಯಾಲಯ ಎರಡು ವಾರಗಳ ರಿಮಾಂಡ್ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘‘ಬಂಧಿತ 19 ಮಂದಿ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಇನ್ನಷ್ಟು ಮಂದಿಯನ್ನು ವಶಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಪ್ರಸ್ತುತ ಪ್ರಕರಣವನ್ನು ಮಾನಂದವಾಡಿ ಉಪ ಪೊಲೀಸ್ ಅಧೀಕ್ಷಕರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣವನ್ನು ಎಡಿಜಿಪಿ ನೇತೃತ್ವದ ವಿಶೇಷ ತನಿಖಾ ತಂಡಕ್ಕೆ ಶೀಘ್ರ ವರ್ಗಾಯಿಸಲಾಗುವುದು’’ ಎಂದು ಅವರು ತಿಳಿಸಿದ್ದಾರೆ. 
ರಾಹುಲ್ ಗಾಂಧಿ ಅವರ ವಯನಾಡ್‌ನಲ್ಲಿರುವ ಕಚೇರಿ ಮೇಲೆ ಎಸ್‌ಎಫ್‌ಐ ಕಾರ್ಯಕರ್ತರು ದಾಳಿ ನಡೆಸಿದ ಗಂಟೆಗಳ ಬಳಿಕ ಎಡಿಜಿಪಿ ಶ್ರೇಣಿಯ ಅಧಿಕಾರಿಯಿಂದ ಉನ್ನತ ಮಟ್ಟದ ತನಿಖೆ ನಡೆಸುವಂತೆ ಎಡರಂಗ ಸರಕಾರ ಶುಕ್ರವಾರ ರಾತ್ರಿ ಆದೇಶಿಸಿದೆ. ಘಟನೆಗೆ ಸಂಬಂಧಿಸಿ ಕಲ್ಪೆಟ್ಟಾ ಉಪ ಪೊಲೀಸ್ ಅಧೀಕ್ಷಕರನ್ನು ಅಮಾನತುಗೊಳಿಸಿದೆ. ಅವರ ಕುರಿತ ತನಿಖೆ ಬಾಕಿ ಇದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News