ಗುಜರಾತ್‌ ಗಲಭೆ ಕುರಿತು ಸುಳ್ಳು ಮಾಹಿತಿ ನೀಡಿದ್ದಾರೆಂದು ಮಾಜಿ ಐಪಿಎಸ್‌ ಅಧಿಕಾರಿ ಶ್ರೀಕುಮಾರ್‌ ಬಂಧನ

Update: 2022-06-25 16:50 GMT
Photo: Indianexpress.com/Prem Nath Pandey

ಹೊಸದಿಲ್ಲಿ: ಗುಜರಾತ್ ಗಲಭೆ ಕುರಿತು ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಮಾಜಿ ಐಪಿಎಸ್ ಅಧಿಕಾರಿ ಆರ್ ಬಿ ಶ್ರೀಕುಮಾರ್ ಅವರನ್ನು ಅಹಮದಾಬಾದ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು 60 ಕ್ಕೂ ಹೆಚ್ಚು ಹಿರಿಯ ಅಧಿಕಾರಿಗಳ ವಿರುದ್ಧ 2002 ರ ಗುಜರಾತ್ ಗಲಭೆಯಲ್ಲಿ ಕೊಲ್ಲಲ್ಪಟ್ಟ ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಕಿಯಾ ಜಾಫ್ರಿ ಅವರು ಮಾಡಿದ ಪಿತೂರಿಯ ಆರೋಪಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಮರುದಿನ ಅವರನ್ನು ಬಂಧಿಸಲಾಗಿದೆ.

2002ರ ಗುಜರಾತ್ ಗಲಭೆಯ ಬಗ್ಗೆ ಸುಳ್ಳು ಮಾಹಿತಿ ನೀಡಿದ ಆರೋಪದಲ್ಲಿ ಗುಜರಾತ್ ಪೊಲೀಸರು ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್, ಮಾಜಿ ಐಪಿಎಸ್ ಅಧಿಕಾರಿ ಆರ್ ಬಿ ಶ್ರೀಕುಮಾರ್ ಮತ್ತು ತೀಸ್ತಾ ಸೆಟಲ್ವಾಡ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳು ಝಕಿಯಾ ಜಾಫ್ರಿ ಮೂಲಕ ನ್ಯಾಯಾಲಯದಲ್ಲಿ ಹಲವು ಅರ್ಜಿಗಳನ್ನು ಸಲ್ಲಿಸಿ ಎಸ್‌ಐಟಿ ಮುಖ್ಯಸ್ಥ ಮತ್ತು ಇತರರಿಗೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಶುಕ್ರವಾರ, ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠವು ಮೇಲ್ಮನವಿಯು ಅರ್ಹವಲ್ಲ ಎಂದು ಹೇಳಿ‌, ಅರ್ಜಿಯನ್ನು ವಜಾಗೊಳಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News